ಹಿಮಾಚಲ ಪ್ರದೇಶದಿಂದ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿರುವ ಮೊದಲ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನವಾಗಿರುವ 25 ವರ್ಷದ ಸುಷ್ಮಾ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಗಮನಾರ್ಹ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಶಿಮ್ಲಾ(ಜು.25): ಭಾರತ ವನಿತೆಯರ ತಂಡದ ವಿಕೆಟ್ ಕೀಪರ್ ಆಟಗಾರ್ತಿ ಸುಷ್ಮಾ ವರ್ಮಾಗೆ ಹಿಮಾಚಲ ಪ್ರದೇಶ ಸರ್ಕಾರ ಡಿಎಸ್'ಪಿ ದರ್ಜೆಯ ಹುದ್ದೆ ನೀಡಲು ಮುಂದಾಗಿದೆ.

ವಿಶ್ವಕಪ್ ಟೂರ್ನಿಯಲ್ಲಿ ಸುಷ್ಮಾ ಗಮನಾರ್ಹ ಪ್ರದರ್ಶನ ತೋರಿದ ಹಿನ್ನಲೆಯಲ್ಲಿ ಹಿಮಾಚಲ ಸರ್ಕಾರ ಡಿಎಸ್'ಪಿ ಹಂತದ ಹುದ್ದೆ ನೀಡುವುದಾಗಿ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್, 'ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯಕ್ಕೆ ಹೆಮ್ಮೆ ತಂದಿರುವ ಸುಷ್ಮಾ ವರ್ಮಾಗೆ ಡೆಪ್ಯುಟಿ ಸೂಪರಿಟೆಡೆಂಟ್ ಹುದ್ದೆ ನೀಡಲಾಗುವುದು' ಎಂದು ಘೋಷಿಸಿದ್ದಾರೆ.

ಹಿಮಾಚಲ ಪ್ರದೇಶದಿಂದ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿರುವ ಮೊದಲ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನವಾಗಿರುವ 25 ವರ್ಷದ ಸುಷ್ಮಾ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಗಮನಾರ್ಹ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಭಾನುವಾರವಷ್ಟೇ ಪಂಜಾಬ್ ಸರ್ಕಾರ ಹರ್ಮನ್'ಪ್ರೀತ್ ಕೌರ್'ಗೆ ಡಿಎಸ್'ಪಿ ಹುದ್ದೆ ನೀಡುವುದಾಗಿ ಘೋಷಿಸಿತ್ತು.