ಮೊಹಾಲಿ(ಸೆ.18): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಪಂದ್ಯ ಮಳೆಯಿಂದ ರದ್ದಾದ  ಬಳಿಕ ಇದೀಗ ಎಲ್ಲರ ಚಿತ್ತ 2ನೇ ಪಂದ್ಯದತ್ತ ನೆಟ್ಟಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ದ್ವಿತೀಯ ಚುಟುಕು ಸಮರದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

"

ಭಾರತ ತಂಡ:

ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ರವೀಂದ್ರ ಜಡೇಜಾ, ವಾಶಿಂಗ್ಟನ್ ಸುಂದರ್, ದೀಪಕ್ ಚಹಾರ್, ನವದೀಪ್ ಸೈನಿ 

 

ಇದನ್ನೂ ಓದಿ: #INDvSA ಧರ್ಮಶಾಲಾ ಪಂದ್ಯ ರದ್ದು; ಬಿಸಿಸಿಐ ವಿರುದ್ಧ ಆಕ್ರೋಶ!

ಮೊದಲ ಪಂದ್ಯ ಮಳೆಗೆ ಆಹುತಿಯಾದ ಕಾರಣ ಉಭಯ ತಂಡಗಳು ಇದೀಗ 2ನೇ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಲ್ಲಿದೆ. ಮೊಹಾಲಿ ಪಂದ್ಯದ ಬಳಿಕ ಸೆ.22 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3ನೇ ಹಾಗೂ ಅಂತಿಮ ಪಂದ್ಯ ನಡೆಯಲಿದೆ. ಬಳಿಕ 3 ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ.