ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಇಶಾಂತ್ ಔಟ್- ಅಶ್ವಿನ್ ಡೌಟ್-ಯಾಕೆ ಹೇಗೆ?
ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಪ್ರಕಟಿಸಲಾಗಿರುವ ತಂಡದಲ್ಲಿ ಆರ್ ಅಶ್ವಿನ್ ಕಮ್‌ಬ್ಯಾಕ್ ಮಾಡಿದ್ದಾರೆ. ಆದರೆ ಆಶ್ವಿನ್ ಆಡೋ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳೋ ಸಾಧ್ಯತೆ ಕಡಿಮೆ. ಇದಕ್ಕೆ ಕಾರಣವೇನು? ಇಲ್ಲಿದೆ
ಸಿಡ್ನಿ(ಜ.02): ಆಸ್ಟ್ರೇಲಿಯಾ ವಿರುದ್ದದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ 13 ಸದಸ್ಯರ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಮೆಲ್ಬರ್ನ್ ಗೆಲುವಿನ ಬಳಿಕ ಆತ್ಮವಿಶ್ವಾಸದಲ್ಲಿರುವ ವಿರಾಟ್ ಕೊಹ್ಲಿ ಸೈನ್ಯದಲ್ಲಿ ಕೆಲ ಬದಲಾವಣ ಮಾಡಲಾಗಿದೆ. ರೋಹಿತ್ ಶರ್ಮಾ ಬದಲು ಆರ್ ಅಶ್ವಿನ್ ತಂಡ ಸೇರಿಕೊಂಡಿದ್ದಾರೆ. ಇನ್ನು ವೇಗಿ ಇಶಾಂತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ.
ಇದನ್ನೂ ಓದಿ: ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಿಸಿದ ಬಿಸಿಸಿಐ!
ಆರ್ ಅಶ್ವಿನ್ ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಕಣಕ್ಕಿಳಿಯೋದು ಡೌಟ್. ಅಶ್ವಿನ್ ಲಭ್ಯತೆ ಕುರಿತು ನಾಳೆ(ಜ.03) ಪಂದ್ಯ ಆರಂಭಕ್ಕೂ ಮುನ್ನ ನಿರ್ಧರಿಸಲಾಗುವುದು ಎಂದು ಟೀಂ ಮ್ಯಾನೇಜ್ಮೆಂಟ್ ಹೇಳಿದೆ.
ಇದನ್ನೂ ಓದಿ: ಕೊಹ್ಲಿಗೆ ಬೆನ್ನು ನೋವು - 2011ರಿಂದಲೇ ಸಮಸ್ಯೆ ಇದೆ ಎಂದ ಕೊಹ್ಲಿ!
ಅಶ್ವಿನ್ ಅಲಭ್ಯರಾದರೆ ತಂಡದಲ್ಲಿ ಮತ್ತೊರ್ವ ಸ್ಪಿನ್ನರ್ ಕುಲ್ದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಆಡಿಲೇಡ್ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಅಶ್ವಿನ್ ಬಳಿಕ ಇಂಜುರಿಗೆ ತುತ್ತಾದರು.