ವಿಶಾಖಪಟ್ಟಣಂ(ಅ.01): ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಸಂಪ್ರದಾಯ ಮುರಿದಿದೆ. ಪ್ರತಿ ಭಾರಿ ಟಾಸ್ ವೇಳೆ ಹನ್ನೊಂದು ಆಟಗಾರರ ಲಿಸ್ಟ್ ಬಹಿರಂಗವಾಗುತ್ತಿತ್ತು. ಇದೀಗ ಪಂದ್ಯಕ್ಕೆ ಒಂದು ದಿನ ಮೊದಲೇ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಪ್ರಕಟಗೊಂಡಿದೆ. ವಿಶಾಖಪಟ್ಟಣಂದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಕೆಲ ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ: ನಂ.1 ಸ್ಥಾನ ಉಳಿ​ಸಿ​ಕೊ​ಳ್ಳುವ ಒತ್ತ​ಡದಲ್ಲಿ ಟೀಂ ಇಂಡಿಯಾ

ನಾಯಕ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಿದರೆ, ಅಜಿಂಕ್ಯ ರಹಾನೆ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ. ನಿಗಧಿತ ಓವರ್ ಕ್ರಿಕೆಟ್‌ನಲ್ಲಿ ಕಳಪೆ ಫಾರ್ಮ್‌ನಲ್ಲಿರುವ ರಿಷಬ್ ಪಂತ್‌ಗೆ ಕೊಕ್ ನೀಡಲಾಗಿದ್ದು, ವೃದ್ದಿಮಾನ್ ಸಾಹಗೆ ಅವಕಾಶ ನೀಡಲಾಗಿದೆ. ಕನ್ನಡಿಗ ಮಯಾಂಕ್ ಅಗರ್ವಾಲ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ ಹಾಗೂ ಮಯಾಂಕ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.\

 

ಇದನ್ನೂ ಓದಿ: ಅಭ್ಯಾಸ ಪಂದ್ಯದಲ್ಲಿ ರೋಹಿತ್‌ ಶೂನ್ಯ

ಸ್ಪಿನ್ನರ್‌ಗಳಾಗಿ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದರೆ, ವೇಗಿಗಳಾಗಿ ಮೊಹಮ್ಮದ್ ಶಮಿ ಹಾಗೂ ಇಶಾಂತ್ ಶರ್ಮಾ ಅವಕಾಶ ಪಡೆದಿದ್ದಾರೆ. ಇದು ಮಯಾಂಕ್ ಅಗರ್ವಾಲ್ ಹಾಗೂ ಹನುಮಾ ವಿಹಾರಿ ತವರಿನಲ್ಲಿ ಮೊದಲ ಟೆಸ್ಟ್ ಪಂದ್ಯ ಆಡಲು ಸಜ್ಜಾಗಿದ್ದಾರೆ. 

ಭಾರತ ಪ್ಲೇಯಿಂಗ್ 11:
ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ(ಉಪನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಹನುಮಾ ವಿಹಾರಿ, ಆರ್ ಅಶ್ವಿನ್, ರವೀಂದ್ರ ಜಡೇಜಾ, ವೃದ್ದಿಮಾನ್ ಸಾಹ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ