ವಿರಾಟ್ ಕೊಹ್ಲಿ ಬರ್ತ್‌ಡೇ ಆಚರಣೆ ಬಳಿಕ ಪತ್ನಿ ಅನುಷ್ಕಾ ಶರ್ಮಾ ದೇವರಿಗೆ ಧನ್ಯವಾದ ಅರ್ಪಿಸಿದ್ದಾರೆ.  ಟ್ವೀಟ್‌ ಮೂಲಕ ಅನುಷ್ಕಾ ಸಂತಸ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ಅನುಷ್ಕಾ ಟ್ವೀಟ್ ಮೂಲಕ ಹೇಳಿದ್ದೇನು? ಇಲ್ಲಿದೆ ವಿವರ.

ಡೆಹರಾಡೂನ್(ನ.05): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಜೊತೆ ತಮ್ಮ 30ನೇ ಹುಟ್ಟುಹಬ್ಬವನ್ನ ಆಚಿರಿಸಿದ್ದಾರೆ. ಉತ್ತರಖಂಡದ ಹರಿದ್ವಾರದಲ್ಲಿ ಬರ್ತ್‌ಡೇ ಆಚರಿಸಿಕೊಂಡಿದ್ದಾರೆ. ತಡ ರಾತ್ರಿ ಕೊಹ್ಲಿ ಹುಟ್ಟು ಹಬ್ಬ ಆಚರಿಸಿದ ಬಳಿಕ ಪತ್ನಿ ಅನುಷ್ಕಾ ಶರ್ಮಾ ದೇವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Scroll to load tweet…

ಕೊಹ್ಲಿಯನ್ನ ಹುಟ್ಟಿಸಿದ ದೇವರಿಗೆ ಧನ್ಯವಾದ ಎಂದು ಅನುಷ್ಕಾ ಶರ್ಮಾ ಟ್ವೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ಕೊಹ್ಲಿ ಜೊತೆಗಿನ ಫೋಟೋ ಪೋಸ್ಟ್ ಮಾಡಿದ್ದಾರೆ. ಹರಿದ್ವಾರದ ಅನಂತ್‌ಧಾಮ್‌ ಆಶ್ರಮಕ್ಕೆ ಕೊಹ್ಲಿ ದಂಪತಿ ಇಂದು ಭೇಟಿ ನೀಡಲಿದ್ದಾರೆ. ಇಲ್ಲಿನ ಅನಂತ್‌ ಬಾಬಾ, ಅನುಷ್ಕಾ ಕುಟುಂಬದ ಆಧ್ಯಾತ್ಮಿಕ ಗುರು ಆಗಿದ್ದಾರೆ. ಕೊಹ್ಲಿ ಹಾಗೂ ಅನುಷ್ಕಾ, ನ.7ರ ವರೆಗೂ ಡೆಹರಾಡುನ್‌ನಲ್ಲೇ ಉಳಿಯಲಿದ್ದು, ಅವರಿಗೆ ವಿಶೇಷ ಭದ್ರತೆ ನೀಡಲಾಗುತ್ತಿದೆ.

ಸದ್ಯ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಆದರೆ ಆಸ್ಟ್ರೇಲಿಯಾ ಪ್ರವಾಸದ ವೇಳೆ ಕೊಹ್ಲಿ ತಂಡಕ್ಕೆ ವಾಪಾಸ್ಸಾಗಲಿದ್ದಾರೆ.