ನಾಯಕ ವಿರಾಟ್ ಕೊಹ್ಲಿ ತಮ್ಮ 16ನೇ ವಯಸ್ಸಿನ  ಫೋಟೋ ಶೇರ್ ಮಾಡಿದ್ದಾರೆ. ಇದೀಗ ಟೀಂ ಇಂಡಿಯಾದಲ್ಲಿ ಹಳೇ ನೆನಪು ಶೇರ್ ಮಾಡಿಕೊಳ್ಳುವ ಟ್ರೆಂಡ್ ಶುರುವಾಗಿದೆ. ಕೊಹ್ಲಿಗೂ ಮೊದಲು ಹಾರ್ದಿಕ್ ಪಾಂಡ್ಯ ಅಪರೂಪದ ಫೋಟೋ ಹಂಚಿಕೊಂಡಿದ್ದಾರೆ. 

ಬೆಂಗಳೂರು(ಸೆ.20): ಸೌತ್ ಆಫ್ರಿಕಾ ವಿರುದ್ದದ 3ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಸೆ.22 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸದಲ್ಲಿ ತೊಡಗಿರುವ ಕೊಹ್ಲಿ, ಬಿಡುವಿನ ವೇಳೆ ಹಳೆ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ: ಕೊಹ್ಲಿ ಯಶಸ್ಸಿಗೆ ಕಾರಣ ಬಿಟ್ಟಿಟ್ಟ ಗೌತಮ್ ಗಂಭೀರ್!

ವಿರಾಟ್ ಕೊಹ್ಲಿ ತಮ್ಮ 16ನೇ ವಯಸ್ಸಿನಲ್ಲಿ ತೆಗೆದ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಟೋ ಜೊತೆಗೆ ಈಗಿನ ಫೋಟೋವನ್ನು ಎಡಿಟ್ ಮಾಡಿರುವ ಕೊಹ್ಲಿ, ನೆನಪಿನ ಬುತ್ತಿ ಬಿಚ್ಚಿಟ್ಟಿದ್ದಾರೆ.

Scroll to load tweet…

ಇದನ್ನೂ ಓದಿ: #INDvSA 2ನೇ ಟಿ20: ರೋಹಿತ್ ದಾಖಲೆ ಮುರಿದ ಕೊಹ್ಲಿ!

ವಿರಾಟ್ ಕೊಹ್ಲಿ ಹಳೇ ಫೋಟೋ ಶೇರ್ ಮಾಡೋ ಮೊದಲು ಟೀಂ ಇಂಡಿಯಾ ಹಾರ್ಧಿಕ್ ಪಾಂಡ್ಯ ಕೂಡ ಹಳೇ ಫೋಟೋ ಶೇರ್ ಮಾಡಿದ್ದರು. ಕ್ರಿಕೆಟ್ ಪಂದ್ಯ ಆಡಲು ಟ್ರಕ್‌ನಲ್ಲಿ ಪ್ರಯಾಣಿಸುತ್ತಿರುವ ಫೋಟೋವನ್ನು ಹಾರ್ದಿಕ್ ಶೇರ್ ಮಾಡಿದ್ದರು.

View post on Instagram