ರೋಹಿತ್‌ಗೆ ಡ್ರೆಸ್ಸಿಂಗ್ ರೂಂ ಬಾಗಿಲು ತೆರೆದ ನಾಯಕ ಕೊಹ್ಲಿ..!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ವೈಮನಸ್ಸು ಬೆಳೆದಿದೆ, ಡ್ರೆಸ್ಸಿಂಗ್ ರೂಂನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಗಾಳಿಸುದ್ದಿಗೆ ನಾಯಕ ವಿರಾಟ್ ಕೊಹ್ಲಿ ಸ್ವತಃ ತೆರೆ ಎಳೆದಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ವಿಶಾಖಪಟ್ಟಣಂ[ಅ.03]: ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಎದುರು ಭರ್ಜರಿ ಪ್ರದರ್ಶನ ತೋರಿದೆ. ಓಪನ್ನರ್ ಆಗಿ ಇದೇ ಮೊದಲ ಬಾರಿಗೆ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಆಕರ್ಷಕ ಶತಕ ಸಿಡಿಸಿದರೆ, ಕನ್ನಡಿಗ ಮಯಾಂಕ್ ಅಗರ್‌ವಾಲ್ 215 ದ್ವಿಶತಕ ಸಿಡಿಸಿ ಮಿಂಚಿದರು.
INDvSA 1ನೇ ಟೆಸ್ಟ್; ಭಾರತ ಬಿಗಿ ಹಿಡಿತ, 3 ವಿಕೆಟ್ ಕಳೆದುಕೊಂಡ ಆಫ್ರಿಕಾ!
ಇದೇ ಪಂದ್ಯ ಒಂದು ಅಚ್ಚರಿಯ ಸನ್ನಿವೇಶಕ್ಕೂ ಸಾಕ್ಷಿಯಾಯಿತು. ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ನಡುವೆ ಭಿನ್ನಾಭಿಪ್ರಾಯಗಳಿವೆ ಎನ್ನುವ ಗಾಳಿಸುದ್ದಿಗೆ ಸ್ವತಃ ಕೊಹ್ಲಿ ತೆರೆ ಎಳೆದಿದ್ದಾರೆ. ಹೌದು, ರೋಹಿತ್ ಶರ್ಮಾ 244 ಎಸೆತಗಳಲ್ಲಿ 23 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 176 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ರೋಹಿತ್ ಪೆವಿಲಿಯನ್ ಗೆ ಮರಳುತ್ತಿದ್ದಂತೆ, ನಾಯಕ ವಿರಾಟ್ ಕೊಹ್ಲಿ ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದು ಮಾತ್ರವಲ್ಲದೇ, ಸ್ವತಃ ಡ್ರೆಸ್ಸಿಂಗ್ ರೂಂ ಬಾಗಿಲು ತೆರೆದರು. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೊಹ್ಲಿ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ರೋಹಿತ್ ಶರ್ಮಾ ಶತಕ ಬಾರಿಸಿದಾಗ, ಹಾಗೆಯೇ 150 ರನ್ ಬಾರಿಸಿದಾಗಲೂ ನಾಯಕ ಕೊಹ್ಲಿ ಎದ್ದು ನಿಂತು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.
ರೋಹಿತ್ ಒಂದು ಶತಕ; ಹಲವಾರು ದಾಖಲೆ ನಿರ್ಮಾಣ..!
ಹೀಗಿತ್ತು ನೋಡಿ ಆ ಕ್ಷಣ:
ರೋಹಿತ್ ಶರ್ಮಾ ಬ್ಯಾಟಿಂಗ್ ಪ್ರದರ್ಶನಕ್ಕೆ ವಿರಾಟ್ ಕೊಹ್ಲಿ ಮಾತ್ರವಲ್ಲದೇ ಟೀಂ ಇಂಡಿಯಾ ಕ್ರಿಕೆಟಿಗರು, ಕೋಚ್ ರವಿ ಶಾಸ್ತ್ರಿ, ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋಡ್, ಬೌಲಿಂಗ್ ಕೋಚ್ ಭರತ್ ಅರುಣ್ ಎದ್ದು ನಿಂತು ಚಪ್ಪಾಳೆ ತಟ್ಟಿದರು. ರೋಹಿತ್ ಶರ್ಮಾ- ಮಯಾಂಕ್ ಅಗರ್‌ವಾಲ್ ಮೊದಲ ವಿಕೆಟ್’ಗೆ ತ್ರಿಶತಕದ ಜತೆಯಾಟದ ನೆರವಿನಿಂದ 502 ರನ್ ಬಾರಿಸಿ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.
ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಭಾರತೀಯ ಸ್ಪಿನ್ನರ್’ಗಳು ಆರಂಭದಲ್ಲೇ ಶಾಕ್ ನೀಡಿದ್ದಾರೆ. ರವಿಚಂದ್ರನ್ ಅಶ್ವಿನ್ 2 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದಿದ್ದಾರೆ. ಎರಡನೇ ದಿನದಂತ್ಯಕ್ಕೆ ದಕ್ಷಿಣ ಆಫ್ರಿಕಾ ತಂಡ 20 ಓವರ್ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು 39 ರನ್ ಬಾರಿಸಿದ್ದು, ಇನ್ನೂ 463 ರನ್ ಗಳ ಹಿನ್ನಡೆಯಲ್ಲಿದೆ.