ಬೆಂಗಳೂರು[ಜೂ.29]: ಟೀಂ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಕರುಣ್ ನಾಯರ್ ತಮ್ಮ ಬಹುಕಾಲದ ಗೆಳತಿ ಸಾನ್ಯ ತಂಕ್ರಿವಾಲಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

'She Said Yes' ’ಆಕೆ ಒಪ್ಪಿಕೊಂಡಳು’ ಎಂದು ಟ್ವೀಟ್ ಮೂಲಕ ಕರುಣ್ ನಾಯರ್ ಎಂಗೇಜ್’ಮೆಂಟ್ ಮಾಡಿಕೊಂಡಿರುವುದನ್ನು ಖಚಿತಪಡಿಸಿದ್ದಾರೆ. 

ಟೆಸ್ಟ್ ಕ್ರಿಕೆಟ್’ನಲ್ಲಿ ವಿರೇಂದ್ರ ಸೆಹ್ವಾಗ್ ಬಳಿಕ ತ್ರಿಶತಕ ಸಿಡಿಸಿದ ಭಾರತದ ಎರಡನೇ ಕ್ರಿಕೆಟಿಗ ಎನ್ನುವ ದಾಖಲೆ ಬರೆದಿರುವ ಕರುಣ್ ನಾಯರ್, ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 
2016-17ರಲ್ಲಿ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ 303 ರನ್ ಬಾರಿಸಿ ದಾಖಲೆ ಬರೆದಿದ್ದರು.