ಶ್ರೀನಗರ[ಆ.07]: ಅರೆಸೇನಾ ಪಡೆಯಲ್ಲಿ ಲೆಫ್ಟಿನೆಂಟ್‌ ಕರ್ನಲ್‌ ಗೌರವ ಹುದ್ದೆ ಹೊಂದಿರುವ ಭಾರತೀಯ ಕ್ರಿಕೆಟಿಗ ಮಹೇಂದ್ರ ಸಿಂಗ್‌ ಧೋನಿ  ಜಮ್ಮು-ಕಾಶ್ಮೀರದಲ್ಲಿ ಸೇವೆ ಆರಂಭಿಸಿದ್ದು, ಅವರು ಇತರೆ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ. 

ವಾರದೊಳಗೆ ಕಾಶ್ಮೀರ ಸಮಸ್ಯೆ ಬಗೆಹರಿಸಿದ MSD

ತಾವೊಬ್ಬ ಜನಪ್ರಿಯ ಕ್ರಿಕೆಟಿಗ, ಸಾವಿರಾರು ಕೋಟಿ ಒಡೆಯ  ಎಂಬ ಹಮ್ಮು-ಬಿಮ್ಮು ಬಿಟ್ಟು ಇತರೆ ಯೋಧರಂತೆ ಸಾಮಾನ್ಯ ಕೊಠಡಿಯಲ್ಲಿ ಕುಳಿತು ತಮ್ಮ ಬೂಟುಗಳನ್ನು ತಾವೇ ಪಾಲಿಶ್‌ ಮಾಡಿಕೊಳ್ಳುವ ಚಿತ್ರವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಯೋಧರಿಗೆ ಹಾಡಿನ ಮೂಲಕ ಸ್ಫೂರ್ತಿ ತುಂಬಿದ ಸೈನಿಕ ಧೋನಿ!

ಧೋನಿಗೆ ಯಾವುದೇ ವಿಶೇಷ ಸೌಲಭ್ಯ, ವಿಶೇಷ ಭದ್ರತೆ ಇಲ್ಲ. ಧೋನಿ ಅವರು ನಮ್ಮ ಇತರ ಯೋಧರಂತೆ ದೇಶ ಸೇವೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕಾಗಿ ನಾನು ಧೋನಿ ಅಭಿಮಾನಿ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.