ಮುಂಬೈ[ಡಿ.31]: ಬಾಕ್ಸಿಂಗ್ ಡೇ ಟೆಸ್ಟ್ ಗೆದ್ದ ಬೆನ್ನಲ್ಲೇ ರೋಹಿತ್ ಶರ್ಮಾ ಪಾಲಿಗೆ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದ್ದು, ರೋಹಿತ್ ಪತ್ನಿ ರಿತಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಟೆಸ್ಟ್ ಸರಣಿ ಅರ್ಧಕ್ಕೆ ಬಿಟ್ಟು ತವರಿಗೆ ರೋಹಿತ್ ಶರ್ಮಾ ವಾಪಸ್..?

ರೋಹಿತ್ ಶರ್ಮಾ ಇದೀಗ ತವರಿಗೆ ಮರಳಿದ್ದು, ಸಿಡ್ನಿಯಲ್ಲಿ ಜನವರಿ 03ರಿಂದ ಆರಂಭವಾಗಲಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಮೆಲ್ಬರ್ನ್ ಟೆಸ್ಟ್’ನ ಮೊದಲ ಇನ್ನಿಂಗ್ಸ್’ನಲ್ಲಿ ರೋಹಿತ್ ಶರ್ಮಾ ಅಜೇಯ ಅರ್ಧಶತಕ ಸಿಡಿಸಿದ್ದರು. ರೋಹಿತ್ ಬದಲಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಪೈನ್‌ ಶತಕ ಬಾರಿಸಿದರೆ ಖರೀದಿಸುತ್ತೇವೆ: ರೋಹಿತ್‌

ರೋಹಿತ್ ಶರ್ಮಾ ಜನವರಿ 08ರಂದು ಏಕದಿನ ತಂಡವನ್ನು ಕೂಡಿಕೊಳ್ಳಲಿದ್ದು, ಜನವರಿ 12ರಿಂದ ಆರಂಭವಾಗಲಿರುವ ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.