ನವದೆಹಲಿ[ಆ.11]: ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಸುರೇಶ್ ರೈನಾ, ಶುಕ್ರವಾರ ಹಾಲೆಂಡ್‌ನ ಆ್ಯಮ್‌ಸ್ಟರ್‌ಡ್ಯಾಂನಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇದರಿಂದಾಗಿ ಮುಂಬರುವ ದೇಸೀ ಕ್ರಿಕೆಟ್‌ನಿಂದ ರೈನಾ ದೂರ ಉಳಿಯಲಿದ್ದಾರೆ. 

ಕಳೆದ ವರ್ಷದಿಂದಲೇ ರೈನಾ ಎಡ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರೈನಾಗೆ 4 ರಿಂದ 6 ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ.

ಸುರೇಶ್ ರೈನಾ ಭಾರತ ಪರ 18 ಟೆಸ್ಟ್, 226 ಏಕದಿನ ಹಾಗೂ 78 ಟಿ20 ಪಂದ್ಯಗಳನ್ನಾಡಿದ್ದಾರೆ. 38 ವರ್ಷದ ರೈನಾ ಜುಲೈ 2018ರಲ್ಲಿ ಭಾರತ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.