ಹೈದರಾಬಾದ್‌(ಜು.31): ಆಂಧ್ರ ಪ್ರದೇಶ ರಣಜಿ ತಂಡದ ಮಾಜಿ ನಾಯಕ, ಭಾರತ ತಂಡದ ಪರವೂ ಆಡಿದ್ದ ವೇಣುಗೋಪಾಲ್‌ ರಾವ್‌ ಮಂಗಳವಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಭಾರತ ಪರ ಅವರು 16 ಏಕದಿನ ಪಂದ್ಯಗಳನ್ನು ಆಡಿದ್ದರು. 1 ಅರ್ಧಶತಕದೊಂದಿಗೆ 218 ರನ್‌ ಗಳಿಸಿದ್ದರು. 37 ವರ್ಷದ ವೇಣುಗೋಪಾಲ್ ರಾವ್ ಇದೀಗ ನಿವೃತ್ತಿ ಘೋಷಿಸಿದ್ದಾರೆ.

ಇದನ್ನೂ ಓದಿ: ಲಸಿತ್ ಮಾಲಿಂಗ ವಿದಾಯ; ಭಾವುಕರಾದ ತೆಂಡುಲ್ಕರ್, ಬುಮ್ರಾ!

121 ಪ್ರಥಮ ದರ್ಜೆ, 137 ಲಿಸ್ಟ್‌ ‘ಎ’ ಪಂದ್ಯಗಳನ್ನು ಆಡಿದ್ದ ಅವರು 65 ಐಪಿಎಲ್‌ ಪಂದ್ಯಗಳನ್ನೂ ಆಡಿದ್ದರು. 2005ರಲ್ಲಿ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಅವರು, 2006ರಲ್ಲಿ ತಮ್ಮ ಕೊನೆ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದರು. ಐಪಿಎಲ್‌ನಲ್ಲಿ ಡೆಕ್ಕನ್‌ ಚಾರ್ಜ​ರ್ಸ್, ಡೆಲ್ಲಿ ಡೇರ್‌ಡೆವಿಲ್ಸ್‌ ಹಾಗೂ ಸನ್‌ರೈಸ​ರ್ಸ್ ಹೈದರಾಬಾದ್‌ ಪರ ಆಡಿದ್ದರು.

ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ಗೆ ಪಾಕಿಸ್ತಾನ ವೇಗಿ ಮೊಹಮ್ಮದ್ ಅಮೀರ್ ವಿದಾಯ!

2006ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಆಡಿದ್ದ ವೇಣುಗೋಪಾಲ್ ರಾವ್ 2015ರ ವರೆಗೆ ದೇಸಿ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದರು. 4 ವರ್ಷ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡೋ ಉತ್ಸಾಹದಲ್ಲಿದ್ದರು. ಆದರೆ ಮತ್ತೆ ತಂಡಕ್ಕೆ ಸೇರಲು ಸಾಧ್ಯವಾಗಿಲ್ಲ. ಇದೀಗ ವಿದಾಯ ಹೇಳಿದ್ದಾರೆ.