ಬೆಂಗಳೂರು[ಸೆ.05]: ವಿಂಡೀಸ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣವಾದ ಟ್ವಿಟರ್’ನಲ್ಲಿ ತಮ್ಮ ಅರೆಬೆತ್ತಲೆ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. 

ಅತ್ಯುತ್ತಮ ನಾಯಕ; ಸಯ್ಯದ್ ಕಿರ್ಮಾನಿ ಆಯ್ಕೆಯಲ್ಲಿ ಕೊಹ್ಲಿಗಿಲ್ಲ ಸ್ಥಾನ!

’ಎಲ್ಲಿಯವರೆಗೂ ನಾವು ನಮ್ಮೊಳಗೆ ನೋಡಿಕೊಳ್ಳುವುದಿಲ್ಲವೋ, ಅಲ್ಲಿಯವರೆಗೆ ಹೊರಗಿನ ಪ್ರಪಂಚವನ್ನು ಅರಿಯಲು ಸಾಧ್ಯವಿಲ್ಲ’ ಎಂದು ಕೊಹ್ಲಿ ಅರೆಬೆತ್ತಲೆ ಚಿತ್ರದ ಜತೆ ಬರೆದುಕೊಂಡಿದ್ದಾರೆ. 

ವಿಂಡೀಸ್ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವುದರ ಜತೆಗೆ ಭಾರತ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎನ್ನುವ ದಾಖಲೆ ಬರೆದ ಕೊಹ್ಲಿ, ಇದೀಗ ಅರೆಬೆತ್ತಲೆಯಾಗಿರುವ ಫೋಟೋಶೂಟ್ ಮಾಡಿಕೊಂಡಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಟೆಸ್ಟ್ ಸರಣಿ ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ICC..!

ವಿರಾಟ್ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್’ನಲ್ಲಿ ಶೂನ್ಯ ಸುತ್ತುವ ಮೂಲಕ ನಿರಾಸೆ ಅನುಭವಿಸಿದ್ದರು. ಇದರೊಂದಿಗೆ ಟೆಸ್ಟ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಾರಿದ್ದರು. ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ ಮೊದಲ ಸ್ಥಾನಕ್ಕೇರಿದ್ದಾರೆ.