ನವದೆಹಲಿ(ಆ.07): ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನ, ಟೀಂ ಇಂಡಿಯಾ ಕ್ರಿಕೆಟಿಗರನ್ನೂ  ಶೋಕಸಾಗರದಲ್ಲಿ ಮುಳುಗಿಸಿದೆ. ಭಾರತ ಕಂಡ ಶ್ರೇಷ್ಠ ರಾಜಕಾರಣಿ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಸುಷ್ಮಾ ಸ್ವರಾಜ್(67) ಹೃದಯಾಘಾತದಿಂದ  ನಿಧನರಾಗಿದ್ದಾರೆ. ಸುಷ್ಮಾ ಅಗಲಿಕೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.