ನವದೆಹಲಿ(ಮೇ.23): ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ದೇಶದೆಲ್ಲಡೆ ಬಿಜೆಪಿ ಸಂಭ್ರಮಾಚರಣೆ ಆಚರಿಸುತ್ತಿದೆ. ಮುಂದಿನ 5 ವರ್ಷ ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಸಜ್ಜಾಗಿದೆ. ಕಳೆದ ಬಾರಿಯಂತೆ ಈ ಭಾರಿಯೂ ಕಾಂಗ್ರೆಸ್ ವಿರೋಧ ಪಕ್ಷಕ್ಕೆ ಸೀಮಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸತತ 2ನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದೀಗ ಮೋದಿ ಹಾಗೂ ಬಿಜೆಪಿ ಗೆಲುವಿಗೆ ಟೀಂ ಇಂಡಿಯಾ ಕ್ರಿಕೆಟಿಗರು, ಕ್ರೀಡಾಪಟುಗಳು ಅಭಿನಂದನೆ ಸಲ್ಲಿಸಿದ್ದಾರೆ.