ನವದೆಹಲಿ(ಮಾ.17): ಗೋಮಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇಂದು(ಮಾ.17) ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಸುತ್ತಿದ್ದ ಮನೋಹರ್ ಪರಿಕ್ಕರ್ ಪಣಜಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.  ಪರಿಕ್ಕರ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸಂತಾಪ ಸೂಚಿಸಿದ್ದಾರೆ.

 

 

ಇದನ್ನೂ ಓದಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಇನ್ನಿಲ್ಲ

ಸೆಹ್ವಾಗ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕ್ಯಾನ್ಸರ್‌ಗೆ ತುತ್ತಾಗಿದ್ದ ಪರಿಕ್ಕರ್ ಅಮೇರಿಕಾಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಕೊಂಚ ಚೇತರಿಸಿಕೊಂಡಿದ್ದ ಪರಿಕ್ಕರ್ ಭಾರತಕ್ಕೆ ಮರಳಿ  ಕೆಲಸ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮತ್ತೆ ಅನಾರೋಗ್ಯಕ್ಕೆ ತುತ್ತಾದ ಪರಿಕ್ಕರ್ ಪಣಜಿ ಆಸ್ಪತ್ರೆಯಲ್ಲಿ ಕಳೆದ ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪರಿಕ್ಕರ್ ನಿಧನರಾಗಿದ್ದಾರೆ.