ಭಾರತ ತಂಡವು ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ದೇಶದ ಜನತೆಗೆ ಒಂದು ದಿನ ಮೊದಲೇ ಗೆಲುವಿನ ಸಿಹಿ ಉಣಬಡಿಸಿತ್ತು.

ಪೆಲ್ಲಿಕೆಲೆ(ಆ.15): ಸದ್ಯ ಶ್ರೀಲಂಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡದ ಸದಸ್ಯರು ಲಂಕಾದ ಕ್ಯಾಂಡಿಯಲ್ಲಿ 71ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕೋಚ್ ರವಿಶಾಸ್ತ್ರಿ ಸೇರಿದಂತೆ ತಂಡದ ಉಳಿದ ಆಟಗಾರರು, ಸಹಾಯಕ ಸಿಬ್ಬಂದಿ, ಕುಟುಂಬ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಧ್ವಜಾರೋಹಣದ ಬಳಿಕ ಎಲ್ಲರು ಒಗ್ಗೂಡಿ ರಾಷ್ಟ್ರಗೀತೆಯನ್ನು ಹಾಡಿದ್ದು, ಭಾರತ ಕ್ರಿಕೆಟ್ ತಂಡ ಹೀಗೆ ಲಂಕಾದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಿದ ವಿಡಿಯೋವನ್ನು ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಅಪ್‌'ಲೋಡ್ ಮಾಡಿದೆ. ವಿಡಿಯೋ ಇದೀಗ ವೈರಲ್ ಆಗಿದೆ.

Scroll to load tweet…

ಭಾರತ ತಂಡವು ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ದೇಶದ ಜನತೆಗೆ ಒಂದು ದಿನ ಮೊದಲೇ ಗೆಲುವಿನ ಸಿಹಿ ಉಣಬಡಿಸಿತ್ತು.