ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-4 ಅಂತರದಲ್ಲಿ ಸೋತರೂ, ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾವೇ ಅಗ್ರಸ್ಥಾನದಲ್ಲಿ ಮುಂದುವರೆದಿದೆ. 

ಲಂಡನ್ (ಸೆ.13): ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-4 ಅಂತರದಲ್ಲಿ ಸೋತರೂ, ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾವೇ ಅಗ್ರಸ್ಥಾನದಲ್ಲಿ ಮುಂದುವರೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಂಡವೊಂದು ಪ್ರಮುಖ ಪಂದ್ಯವೊಂದರಲ್ಲಿ ಕಂಡ ಸೋಲು-ಗೆಲುವಿಗನುಗುಣವಾಗಿ ಶ್ರೇಯಾಂಕದಲ್ಲಿ ಬದಲಾವಣೆಯಾತ್ತೆ. ಆದರೆ, ಆಂಗ್ಲರ ವಿರುದ್ಧ ಟೆಸ್ಟ್ ಸರಣಿ ಸೋಲಿನ ಫಲಿತಾಂಶ ಭಾರತದ ಶ್ರೇಯಾಂಕದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. 

ಹೊಸ ಶ್ರೇಯಾಂಕ ಪಟ್ಟಿಯಲ್ಲಿ 4016 ಅಂಕ ಸಂಪಾದಿಸಿರುವ ಭಾರತ ಅಗ್ರ ಸ್ಥಾನದಲ್ಲಿದ್ದರೆ, 3712 ಅಂಕ ಗಳಿಸಿರುವ ದಕ್ಷಿಣ ಆಫ್ರಿಕಾ 2ನೇ ಸ್ಥಾನದಲ್ಲಿದೆ. ಇನ್ನು 3499 ಅಂಕದೊಂದಿಗೆ ಆಸ್ಟ್ರೇಲಿಯಾ 3ನೇ ಸ್ಥಾನದಲ್ಲಿದೆ. ಇಂಗ್ಲೆಂಡ್ 4722 ಅಂಕ ಗಳಿಸಿ 4ನೇ ಸ್ಥಾನಕ್ಕೇರಿದರೆ, ನ್ಯೂಜಿಲೆಂಡ್ 2,354 ಪಾಂಯಿಂಟ್ಸ್‌ಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ.

ಅಂಕಗಳಲ್ಲಿ ಇಂಗ್ಲೆಂಡ್ ಹೆಚ್ಚಿನ ಮೊತ್ತ ಸಂಪಾದಿಸಿದೆಯಾದರೂ ರೇಟಿಂಗ್ ಪಾಯಿಂಟ್ ಅನ್ನು ಅವಲಂಭಿಸಿರುವುದರಿಂದ ಭಾರತ ಅಗ್ರ ಸ್ಥಾನದಲ್ಲಿದೆ. ಭಾರತ 115, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಲಾ 106, ಇಂಗ್ಲೆಂಡ್ 105, ನ್ಯೂಜಿಲ್ಯಾಂಡ್ 102 ರೇಟಿಂಗ್ ಪಾಯಿಂಟ್ ಹೊಂದಿದೆ.