ನವದೆಹಲಿ(ಸೆ.12): ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದ ಮರುನಾಮಕ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಟೀಂ ಇಂಡಿಯಾ ಕ್ರಿಕೆಟಿಗರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕೊಹ್ಲಿ ಜೊತೆಗೆ ಪತ್ನಿ ಅನುಷ್ಕಾ ಶರ್ಮಾ ಕೂಡ ಉಪಸ್ಥಿತರಿದ್ದರು. ಇದೀಗ ಟ್ರೋಲಿಗರಿಗೆ ಆಹಾರವಾಗಿದೆ. ಕೋಟ್ಲಾ ಕ್ರೀಡಾಂಗಣವನ್ನು ಅರುಣ್ ಜೇಟ್ಲಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ. ಇನ್ನು ಕ್ರೀಡಾಂದಲ್ಲಿನ ಒಂದು ಸ್ಟ್ಯಾಂಡ್‌ಗೆ ವಿರಾಟ್ ಕೊಹ್ಲಿ ಸ್ಟ್ಯಾಂಡ್ ಎಂದು ಹೆಸರಿಡಲಾಗಿದೆ. ಈ ಸಮಾರಂಭದಲ್ಲಿ ಕೊಹ್ಲಿ, ಅಮಿತ್ ಶಾ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗರ ಮಾತುಕತೆಯಲ್ಲಿ ಅನುಷ್ಕಾ ಕಾಣಿಸಿಕೊಂಡಿದ್ದು ಟ್ರೋಲ್ ಆಗಿದೆ.

ಇದನ್ನೂ ಓದಿ: ಕೋಟ್ಲಾ ಈಗ ಜೇಟ್ಲಿ ಕ್ರೀಡಾಂಗಣ; ಸಮಾರಂಭದಲ್ಲಿ ಕೊಹ್ಲಿ, ಅಮಿತ್ ಶಾ!