ರಾಂಚಿ[ಮಾ.08]: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿಯುವ ಮೂಲಕ ಪುಲ್ವಾಮಾದಲ್ಲಿ ಹುತಾತ್ಮರಾದ ವೀರ ಯೋಧರಿಗೆ  ಗೌರವ ಸೂಚಿಸಿದೆ.

ರಾಂಚಿ ಫೈಟ್: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಟಾಸ್’ಗೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸಹ ಆಟಗಾರರಿಗೆ ಸೇನಾ ಕ್ಯಾಪ್ ವಿತರಿಸಿದರು. ಭಾರತೀಯ ಸೈನಿಕರಿಗೆ ಗೌರವ ಸೂಚಕವಾಗಿ ಟೀಂ ಇಂಡಿಯಾ ಕ್ರಿಕೆಟಿಗರು ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದಾರೆ.

ಹೀಗಿತ್ತು ಆ ಕ್ಷಣ:

ಟಾಸ್ ಗೆದ್ದ ಬಳಿಕ ಮಾತನಾಡಿದ ಕೊಹ್ಲಿ, ಇದೊಂದು ವಿಶೇಷ ಕ್ಯಾಪ್. ನಮ್ಮ ಸೈನಿಕರಿಗೆ ಗೌರವ ಸೂಚಕವಾಗಿ ಈ ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿಯುತ್ತಿದ್ದೇವೆ. ನಾವೆಲ್ಲಾ ಈ ಪಂದ್ಯದ ಸಂಪೂರ್ಣ ಸಂಭಾವನೆಯನ್ನು ಭಾರತೀಯ ಸೇನಾ ನಿಧಿಗೆ ಅರ್ಪಿಸುತ್ತಿದ್ದೇವೆ. ದೇಶದ ಪ್ರತಿಯೊಬ್ಬರು ನಮ್ಮ ಸೇನೆಯ ಹಾಗೂ ಅವರ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು. ಟೀಂ ಇಂಡಿಯಾದ ಈ ನಡೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. 

ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ನಡೆದ ಆತ್ಮಾಹುತಿ ದಾಳಿಯಲ್ಲಿ ಭಾರತದ 44 ಸಿಆರ್’ಪಿಎಫ್ ಯೋಧರು ಹುತಾತ್ಮರಾಗಿದ್ದರು.