ಭಾರತ - ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸಂಭಾವ್ಯ ತಂಡವನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ. ನಿಮ್ಮ ಆಯ್ಕೆ ಏನು ಕಮೆಂಟ್ ಮಾಡಿ...

ಪೋರ್ಟ್ ಆಫ್ ಸ್ಪೇನ್[ಆ.11]: ಭಾರತ-ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭಾರತ ತಂಡವು ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಮೊದಲ ಗೆಲುವಿನ ಕನವರಿಕೆಯಲ್ಲಿದೆ.
ಹೌದು, ಭಾರತ-ವಿಂಡೀಸ್ ನಡುವಿನ ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ, ಇದೀಗ ಎರಡನೇ ಪಂದ್ಯದಲ್ಲಾದರೂ ಗೆದ್ದು, ಮೂರು ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಕೊಹ್ಲಿ ಪಡೆ ಎದುರು ನೋಡುತ್ತಿದೆ. ಇದರ ಜೊತೆಗೆ ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂಡೋ-ವಿಂಡೀಸ್ ಫೈಟ್: ಮಳೆಯ ಭೀತಿಯಲ್ಲಿ 2ನೇ ಏಕದಿನ ಪಂದ್ಯ..!

ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಆರಂಭಿಕರಾಗಿ ಧವನ್ ಹಾಗೂ ರೋಹಿತ್ ಕಣಕ್ಕಿಳಿದರೆ, ಆ ಬಳಿಕ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಕಣಕ್ಕಿಳಿಯಲಿದ್ದಾರೆ. ಕೇದಾರ್ ಜಾಧವ್, ರವೀಂದ್ರ ಜಡೇಜಾ, ಕುಲ್ದೀಪ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಗೇಲ್ ಜತೆ ಭರ್ಜರಿ ಡ್ಯಾನ್ಸ್ ಮಾಡಿದ ಕೊಹ್ಲಿ..! ವಿಡಿಯೋ ವೈರಲ್‌!

ಒಂದು ಬದಲಾವಣೆ: ಇನ್ನು ಮೊದಲ ಏಕದಿನ ಪಂದ್ಯದಲ್ಲಿ ಕೇವಲ 3 ಓವರ್ ಬೌಲಿಂಗ್ ಮಾಡಿ 27 ರನ್ ಚಚ್ಚಿಸಿಕೊಂಡಿದ್ದ ಎಡಗೈ ವೇಗಿ ಖಲೀಲ್ ಅಹಮ್ಮದ್ ಅವರನ್ನು ಕೈಬಿಟ್ಟು, ನವದೀಪ್ ಸೈನಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಹೀಗಾದರೆ ಸೈನಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದಂತಾಗುತ್ತದೆ. ಇನ್ನುಳಿದಂತೆ ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ವೇಗದ ಬೌಲಿಂಗ್ ಸಾರಥ್ಯ ವಹಿಸಲಿದ್ದಾರೆ. 

2ನೇ ಏಕದಿನ ಪಂದ್ಯಕ್ಕೆ ಸುವರ್ಣ ನ್ಯೂಸ್.ಕಾಂ ಆಯ್ಕೆ ಮಾಡಿದ ಸಂಭಾವ್ಯ ಟೀಂ ಇಂಡಿಯಾ ಹೀಗಿದೆ ನೋಡಿ

ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ[ನಾಯಕ], ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನವದೀಪ್ ಸೈನಿ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.