ಇಂಡೋ-ವಿಂಡೀಸ್ ಫೈಟ್: ಹೀಗಿದೆ ನೋಡಿ ಭಾರತ ಸಂಭಾವ್ಯ ತಂಡ

ಭಾರತ-ವಿಂಡೀಸ್ ನಡುವಿನ ಮೂರನೇ ಹಾಗೂ ಅಂತಿಮ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡವನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.... 

Team India Probable playing XI Squad against West Indies 3rd ODI match

ಪೋರ್ಟ್‌ ಆಫ್‌ ಸ್ಪೇನ್‌[ಆ.14]: ಭಾರತ-ವೆಸ್ಟ್ ಇಂಡೀಸ್ ನಡುವಿನ ಅಂತಿಮ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾ ಮತ್ತೊಂದು ಸರಣಿ ಮೇಲೆ ಕಣ್ಣಿಟ್ಟಿದೆ. ಈಗಾಗಲೇ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ವಿರಾಟ್ ಪಡೆ, ಇದೀಗ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ.

ಇಂಡೋ-ವಿಂಡೀಸ್ ಫೈಟ್: ಸರಣಿ ಜಯದ ಮೇಲೆ ಕಣ್ಣಿಟ್ಟ ಭಾರತ

ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿಯ ಆಕರ್ಷಕ ಶತಕ ಹಾಗೂ ಭುವನೇಶ್ವರ್ ಕುಮಾರ್ ಮಿಂಚಿನ ದಾಳಿಯ ನೆರವಿನಿಂದ 59 ರನ್ ಗಳ ಗೆಲುವು ದಾಖಲಿಸಿತ್ತು. ಇದರೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿತ್ತು. ಇಂದು ನಡೆಯುವ ಪಂದ್ಯವನ್ನು ಜಯಿಸುವುದರೊಂದಿಗೆ ಸರಣಿ ಜಯಿಸುವ ಲೆಕ್ಕಾಚಾರದಲ್ಲಿದೆ ಟೀಂ ಇಂಡಿಯಾ. ಆದರೆ ಬಹುತೇಕ ವೃತ್ತಿಜೀವನದ ಕೊನೆಯ ಏಕದಿನ ಪಂದ್ಯವಾಡುತ್ತಿರುವ ಕೆರಿಬಿಯನ್ ಸ್ಫೋಟಕ ಬ್ಯಾಟ್ಸ್’ಮನ್ ಕ್ರಿಸ್ ಗೇಲ್’ಗೆ ಗೆಲುವಿನ ವಿದಾಯ ನೀಡಲು ವಿಂಡೀಸ್ ಬಳಗ ಸಜ್ಜಾಗಿದೆ.

ರಿಷಭ್ ಪಂತ್ ಕಳಪೆ ಬ್ಯಾಟಿಂಗ್; ಅಭಿಮಾನಿಗಳಿಂದ ಕ್ಲಾಸ್!

ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ:
ವಿಶ್ವಕಪ್ ಟೂರ್ನಿಯಲ್ಲಿ ಗಾಯಗೊಂಡಿದ್ದ ಶಿಖರ್ ಧವನ್ ಆ ಬಳಿಕ ತಂಡಕ್ಕೆ ಕಮ್’ಬ್ಯಾಕ್ ಮಾಡಿದ್ದರೂ, ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿಲ್ಲ.  ಸತತ 4 ಪಂದ್ಯಗಳಲ್ಲಿ ಧವನ್ ಕೇವಲ 29 ರನ್’ಗಳನ್ನಷ್ಟೇ ಬಾರಿಸಿದ್ದಾರೆ. ಟಿ20 ಸರಣಿಯಲ್ಲಿ 1, 23, 3 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದ ಧವನ್, ಏಕದಿನ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಕೇವಲ 2 ರನ್ ಬಾರಿಸಿ ಪೆವಿಲಿಯನ್ ಸೇರಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಧವನ್’ಗೆ ವಿಶ್ರಾಂತಿ ನೀಡಿ ಕನ್ನಡಿಗ ಕೆ.ಎಲ್ ರಾಹುಲ್’ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಇನ್ನುಳಿದಂತೆ ವಿರಾಟ್ ಕೊಹ್ಲಿ ಹೆಚ್ಚಿನ ಪ್ರಯೋಗಕ್ಕೆ ಮುಂದಾಗುವ ಸಾಧ್ಯತೆ ಕಡಿಮೆ.

ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್.ಕಾಂ ಆಯ್ಕೆ ಮಾಡಿದ ಸಂಭಾವ್ಯ ತಂಡ ಹೀಗಿದೆ ನೋಡಿ...
ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಖಲೀಲ್ ಅಹಮ್ಮದ್. 

ಪಂದ್ಯ ಆರಂಭ: ಸಂಜೆ 7ಕ್ಕೆ, 
ನೇರ ಪ್ರಸಾರ: ಸೋನಿ ಟೆನ್‌ 1
 

Latest Videos
Follow Us:
Download App:
  • android
  • ios