ಮುಂಬೈ[ಜು.21]: ಭಾರತ ತಂಡದ ಆಯ್ಕೆ ಇಂದು ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳಲಿರುವ ಭಾರತ ತಂಡದ ಆಯ್ಕೆ ಪ್ರಕ್ರಿಯೆ ಸಭೆ ಭಾನುವಾರ ಮುಂಬೈನ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ. ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ. ಪ್ರಸಾದ್ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. 

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಆಯ್ಕೆ: 3 ಮಾದರಿಗೂ ಕೊಹ್ಲಿಯೇ ನಾಯಕ

ಆಗಸ್ಟ್ 3 ರಿಂದ ಸೆಪ್ಟೆಂಬರ್ 3 ರವರೆಗೆ ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಡೆಯಲಿದೆ. 1 ತಿಂಗಳು ನಡೆಯುವ ಸರಣಿಯಲ್ಲಿ ಟೀಂ ಇಂಡಿಯಾ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ವಿರಾಟ್ ಕೊಹ್ಲಿ ವಿಂಡೀಸ್ ಪ್ರವಾಸಕ್ಕೆ ಲಭ್ಯರಿದ್ದು, ಮೂರು ಮಾದರಿಯಲ್ಲೂ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.

ಧೋನಿಗೆ ವಿಶ್ರಾಂತಿ ನೀಡಿರುವುದರಿಂದ ರಿಷಭ್ ಪಂತ್ ಏಕದಿನ ತಂಡದಲ್ಲಿ ತಂಡದಲ್ಲಿ ಉಳಿಸಿಕೊಳ್ಳಲಿದ್ದಾರೆ. ಇನ್ನು ಕನ್ನಡಿಗರಾದ ಮಯಾಂಕ್ ಅಗರ್’ವಾಲ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ಶುಭ್’ಮನ್ ಗಿಲ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.