ಮುಂಬೈ(ಸೆ.13): ಸೆಪ್ಟಂಬರ್ 22 ರಿಂದ ನಡೆಯುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಮುಂಬೈನಲ್ಲಿ ನಡೆದ ಸಭೆಯಲ್ಲಿಂದು ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.
ವಿರಾಟ್ ಕೊಹ್ಲಿ ಸಾರಥ್ಯದಲ್ಲಿ 15 ಜನರ ತಂಡವನ್ನು ಆಯ್ಕೆ ಮಾಡಿದ್ದು, ಕನ್ನಡಿಗ ಕೆ.ಎಲ್ ರಾಹುಲ್ ಸ್ಥಾನ ಪಡೆಯುವಲ್ಲಿ ಸಫಲವಾಗಿದ್ದಾರೆ. ಸೆಪ್ಟಂಬರ್ 22 ರಂದು ಕಾನ್ಪುರದಲ್ಲಿ ಟೆಸ್ಟ್ ಸರಣಿ ಆರಂಭವಾಗಲಿದ್ದು. ಭಾರತ ತಂಡ ಟೆಸ್ಟ್'ನಲ್ಲಿ ಅಗ್ರಸ್ಥಾನಕ್ಕೇರಲು ಈ ಸರಣಿ ಮಹತ್ವದಾಗಿದೆ.
ಟೀಮ್ ಇಂಡಿಯಾ 15 ಆಟಗಾರರ ತಂಡ ಇಂತಿದೆ:
ವಿರಾಟ್ ಕೊಹ್ಲಿ ನಾಯಕ, ಮುರಳಿ ವಿಜಯ್, ಕೆ.ಎಲ್ ರಾಹುಲ್, ಶಿಖರ್ ಧವನ್ ಆರಂಭಿಕ ಬ್ಯಾಟ್ಸ್ಮನ್ಗಳು. ಅಜಿಂಕ್ಯಾ ರಹಾನೆ, ಚೇತೇಶ್ವರ್ ಪೂಜಾರ, ರೋಹಿತ್ ಶರ್ಮಾ, ಮತ್ತು ವೃದ್ಧಿಮಾನ್ ಸಾಹ, ಮಧ್ಯಮ ಕ್ರಮಾಂಕ ಬ್ಯಾಟ್ಸಮ್ನಗಳು. ರವಿಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಆಲ್ರೌಂಡರ್ಗಳು. ಅಮಿತ್ ಮಿಶ್ರಾ ಸ್ಪಿನ್ ಬೌಲರ್. ಫಾಸ್ಟ್ ಬೌಲರ್ಗಳಾದ ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮಾ, ಮೊಹ್ಮದ್ ಶಮಿ ಮತ್ತು ಉಮೇಶ್ ಯಾದವ್ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ..
