ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಏಕದಿನ, ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಕಮ್‌ಬ್ಯಾಕ್ ಮಾಡಿದ್ದರೆ, ಯುವ ವಿಕೆಟ್ ಕೀಪರ್ ರಿಷಬ್ ಪಂತ್‌ಗೆ ಗೇಟ್ ಪಾಸ್ ನೀಡಲಾಗಿದೆ.
ಮುಂಬೈ(ಡಿ.24): ಆಸ್ಟ್ರೇಲಿಯಾ ವಿರುದ್ಧ ತೃತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗುತ್ತಿದೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ದದ ಏಕದಿನ ಹಾಗೂ ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ಎಂ.ಎಸ್.ಧೋನಿ ಮತ್ತೆ ತಂಡ ಸೇರಿಕೊಂಡಿದ್ದಾರೆ.
ಇದನ್ನೂ ಓದಿ: ಮೆಲ್ಬರ್ನ್ ಟೆಸ್ಟ್: ದ್ರಾವಿಡ್ ದಾಖಲೆ ಮುರೀತಾರಾ ವಿರಾಟ್?
ಏಕದಿನ ತಂಡದಲ್ಲಿ ರಿಷಬ್ ಪಂತ್ ಬದಲು ಬ್ಯಾಕ್ ಆಪ್ ವಿಕೆಟ್ ಕೀಪರ್ ಆಗಿ ದಿನೇಶ್ ಕಾರ್ತಿಕ್ ಆಯ್ಕೆ ಮಾಡಲಾಗಿದೆ. ಇಂಜುರಿಯಿಂದ ಚೇತರಿಸಿಕೊಂಡಿರುವ ಕೇದಾರ್ ಜಾದವ್ ಕೂಡ ತಂಡದಲ್ಲಿ ಸ್ಥಾನ ಪಡೆಯಲಾಗಿದೆ. ಬಹುತೇಕ ಇದೇ ತಂಡ 2019ರ ವಿಶ್ವಕಪ್‌ಗೂ ಆಯ್ಕೆಯಾಗೋ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ: ಜಿಆರ್’ವಿಗೆ ಲಕ್ಷ್ಮಣ್ ಗೌರವ, ಆಟೋಗ್ರಾಫ್’ನಲ್ಲಿ ’ವಿಶಿ’ಗೆ ಗುರುವಂದನೆ
ಭಾರತ ಏಕದಿನ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ಅಂಬಾಟಿ ರಾಯುಡು, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂ.ಎಸ್.ಧೋನಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಮೊಹಮ್ಮದ್ ಶಮಿ
ಭಾರತ ಟಿ20 ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂ.ಎಸ್.ಧೋನಿ, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್
