ಲಂಡನ್ ಹೈಕಮಿಶನ್ ಭೇಟಿಯಾದ ಟೀಂ ಇಂಡಿಯಾ

First Published 8, Aug 2018, 3:03 PM IST
Team India Visit Indian High Commission in UK
Highlights

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ 2ನೇ ಟೆಸ್ಟ್ ಪಂದ್ಯಕ್ಕೂ ಮೊದಲು ಭಾರತೀಯ ಹೈಕಮಿಶನ್ ಕಚೇರಿಗೆ ಭೇಟಿ ನೀಡಿದೆ. ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೂ ಮುನ್ನ ಕೊಹ್ಲಿ ಸೈನ್ಯ ಹೈಕಮಿಶನ್ ಕಚೇರಿಗೆ ಭೇಟಿ ನೀಡಿದ್ದೇಕೆ? ಇಲ್ಲಿದೆ ವಿವರ
 

ಲಂಡನ್(ಆ.08): ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ನಾಯಕತ್ವದ  ಟೀಂ ಇಂಡಿಯಾ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಶನ್ ಕಚೇರಿಗೆ ಭೇಟಿ ನೀಡಿದೆ. 

ಭಾರತೀಯ ಹೈಕಮಿಶನ್ ಕಚೇರಿಗೆ  ನಾಯಕ ವಿರಾಟ್ ಕೊಹ್ಲಿ, ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸೇರಿದಂತೆ ಸಂಪೂರ್ಣ ಟೀಂ ಇಂಡಿಯಾ ಭೇಟಿ ನೀಡಿತು. ಬಿಸಿಸಿಐ ಇವರ ಭೇಟಿ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದೆ.

 

 

ಪ್ರತಿ ಬಾರಿ ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ, ಹೈಕಮಿಶನ್ ಕಚೇರಿಗೆ ಭೇಟಿ ನೀಡುತ್ತಿದ್ದು, ಈ ಬಾರಿಯೂ ಸಂಪ್ರದಾಯ ಮುಂದುವರಿಸಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬಳಿಕ ಇದೀಗ ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೆ ಭಾರತ ತಯಾರಿ ನಡೆಸಿದೆ. ನಾಳೆ(ಆ.9)ಯಿಂದ ಆರಂಭಗೊಳ್ಳಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 31 ರನ್‌ಗಳ ಸೋಲು ಅನುಭವಿಸಿತ್ತು. ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನೀಡಿದರೂ ತಂಡವನ್ನ ಗೆಲ್ಲಿಸಲು ಸಾಧ್ಯವಾಗಲಿಲ್ಲ. 
 

loader