ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯಗಳಿಸುವ ಮೂಲಕ ಭಾರತ 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

ನವದೆಹಲಿ(ಜು.07): ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯಗಳಿಸುವ ಮೂಲಕ ಭಾರತ 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 50 ಓವರ್ ಗಳಲ್ಲಿ 205 ರನ್ ಗಳಿಸಿ ಅಲ್ಪ ಮೊತ್ತದ ಗುರಿ ನೀಡಿತು. ಗುರಿಯನ್ನು ಬೆನ್ನತ್ತಿದ್ದ ಟೀಂ ಇಂಡಿಯಾ ಕೇವಲ 37 ಓವರ್'ಗಳಲ್ಲೇ ಗುರಿ ಮುಟ್ಟಿ ವಿಜಯದ ನಗೆ ಬೀರಿತು. ನಾಯಕ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ 28ನೇ ಶತಕ ದಾಖಲಿಸಿದರು.

ದಿನೇಶ್ ಕಾರ್ತಿಕ್ ಕೂಡ ಉತ್ತವನವಾಗಿ ಬ್ಯಾಟಿಂಗ್ ನಡೆಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಶತಕ ಸಿಡಿಸಿದ ಕೊಹ್ಲಿ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು. ಕೊಹ್ಲಿ ಹುಡುಗರು ಅಂತಿಮವಾಗಿ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿದ್ರು. ಸರಣಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಅಜಿಂಕ್ಯಾ ರಹಾನೆ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.