ನಾಟಿಂಗ್‌ಹ್ಯಾಮ್(ಜು.12): ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸುತ್ತಿದೆ. ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗರು ನೆಟ್ ಪ್ರಾಕ್ಟೀಸ್ ನಡೆಸಿದರು.

ಬೌಲಿಂಗ್, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಅಭ್ಯಾಸ ಮಾಡಿದ ಟೀಂ ಇಂಡಿಯಾ, ಮೊದಲ ಪಂದ್ಯಕ್ಕೆ ಸಂಪೂರ್ಣ ತಯಾರಿ ನಡೆಸಿದೆ. ಅಂತಿಮ ಟಿ20 ಪಂದ್ಯದಿಂದ ಹೊರಗುಳಿದಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ನೆಟ್ ಪ್ರಾಕ್ಟೀಸ್ ನಡೆಸಿದ್ದಾರೆ. ಈ ಮೂಲಕ ಕುಲದೀಪ್ ಇಂದು ಕಣಕ್ಕಿಳಿಯೋ ಸೂಚನೆ ನೀಡಿದ್ದಾರೆ.

 

 

ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಅಭ್ಯಾಸ ಕೂಡ ಮಾಡಿದ್ದಾರೆ. ಹೀಗಾಗಿ ದಿನೇಶ್ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯೋ ಸಾಧ್ಯತೆಗಳಿದೆ. ಏಕದಿನದಲ್ಲಿ ಸುರೇಶ್ ರೈನಾ ಬದಲು ದಿನೇಶ್ ಕಾರ್ತಿಕ್‌ಗೆ ಸ್ಥಾನ ನೀಡಬೇಕು ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಆಗ್ರಹಿಸಿದ್ದರು.