ಕಾರ್ಡಿಫ್(ಜು.05): ಇಂಗ್ಲೆಂಡ್ ವಿರುದ್ಧ ದ್ವಿತೀಯ ಟ20 ಪಂದ್ಯಕ್ಕೆ ಭಾರತ ಭರ್ಜರಿ ಅಭ್ಯಾಸ ನಡೆಸಿದೆ. ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ನಾಳೆ(ಜು.06) ನಡೆಯಲಿರುವ 2ನೇ ಟಿ20 ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳೋ ಲೆಕ್ಕಾಚಾರದಲ್ಲಿದೆ.

ದ್ವಿತಿಯೀ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಕಾರ್ಡಿಫ್ ಮೈದಾನದಲ್ಲಿ ಭರ್ಜರಿ ಅಭ್ಯಾಸ ನಡೆಸಿದರು. ನಾಯಕ ವಿರಾಟ್ ಕೊಹ್ಲಿ, ಎಂ ಎಸ್ ಧೋನಿ ಹಾಗೂ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ತಾಲೀಮು ನಡೆಸಿದರು.

 

 

#TeamIndia boys sweating it out in the nets ahead of the 2nd T20I against England. #ENGvIND

A post shared by Team India (@indiancricketteam) on Jul 5, 2018 at 8:18am PDT

 

ಮೊದಲ ಟಿ20 ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಕುಲದೀಪ್ ಯಾದವ್ 5 ವಿಕೆಟ್ ಕಬಳಿಸಿದ್ದರೆ, ಕೆಎಲ್ ರಾಹುಲ್ ಶತಕ ಸಿಡಿಸಿ ಮಿಂಚಿದ್ದರು. ಇದೀಗ 2ನೇ ಪಂದ್ಯದಲ್ಲೂ ಭಾರತ ಅದ್ಬುತ ಪ್ರದರ್ಶನ ಮುಂದುವರಿಸೋ ವಿಶ್ವಾಸದಲ್ಲಿದೆ.