ಬೆಂಗಳೂರು(ಜ.05): ಮಹಾರಾಷ್ಟ್ರದ ಪುಣೆಯಲ್ಲಿ ಜ.9ರಿಂದ ನಡೆಯಲಿರುವ ಖೇಲೋ ಇಂಡಿಯಾ ಯುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಕರ್ನಾಟಕ ಖೋಖೋ ಸಂಸ್ಥೆಗೆ ಅನುಮತಿ ನೀಡದೇ ಇರುವ ಪ್ರಕರಣಕ್ಕೆ ಸಂಬಂಧಿಸಿ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.

ಖೇಲೋ ಇಂಡಿಯಾ: 734 ಕ್ರೀಡಾಪ್ರತಿಭೆಗಳಿಗೆ ಸ್ಕಾಲರ್’ಶಿಪ್

ಕೂಟದಲ್ಲಿ ಪಾಲ್ಗೊಳ್ಳಲು ತಮಗೆ ಅನುಮತಿ ನೀಡದ ಸರ್ಕಾರದ ಕ್ರಮ ಪ್ರಶ್ನಿಸಿ ಖೋ ಖೋ ಸಂಸ್ಥೆ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಸೂಚನೆ ನೀಡಿತು.

‘ಮುಂದಿನ ದಿನಗಳಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಸಮಸ್ಯೆ ಎದುರಾಗಬಹುದು. ಹೀಗಾಗಿ ಅರ್ಜಿ ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸಲಾಗುವುದು’ ಎಂದು ನ್ಯಾಯಪೀಠ ತಿಳಿಸಿದೆ.