ಬ್ಯಾಂಕಾಕ್‌(ಆ.01): ಭಾರತದ ತಾರಾ ಶಟ್ಲರ್‌ಗಳಾದ ಸೈನಾ ನೆಹ್ವಾಲ್‌ ಹಾಗೂ ಕಿದಂಬಿ ಶ್ರೀಕಾಂತ್‌ ಇಲ್ಲಿ ನಡೆಯುತ್ತಿರುವ ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿದ್ದಾರೆ.

ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌; ಸೆಮೀಸ್‌ನಲ್ಲಿ ಸೋತ ಪ್ರಣೀತ್‌

2 ತಿಂಗಳ ಬಳಿಕ ಅಂಕಣಕ್ಕೆ ಮರಳಿದ ಸೈನಾ, ಮಹಿಳಾ ಸಿಂಗಲ್ಸ್‌ ಮೊದಲ ಸುತ್ತಿನಲ್ಲಿ ಸ್ಥಳೀಯ ಆಟಗಾರ್ತಿ ಚೈವಾನ್‌ ವಿರುದ್ಧ 21-17, 21-19 ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. ಪುರುಷರ ಸಿಂಗಲ್ಸ್‌ ಮೊದಲ ಸುತ್ತಿನ ಪಂದ್ಯದಲ್ಲಿ ಶ್ರೀಕಾಂತ್‌, ಎಚ್‌.ಎಸ್‌.ಪ್ರಣಯ್‌, ಪಾರುಪಲ್ಲಿ ಕಶ್ಯಪ್‌ ಹಾಗೂ ಶುಭಾಂಕರ್‌ ಡೇ 2ನೇ ಸುತ್ತಿಗೆ ಪ್ರವೇಶ ಪಡೆದರು.

ಇದೇ ವೇಳೆ ಮಿಶ್ರ ಡಬಲ್ಸ್‌ ಮೊದಲ ಸುತ್ತಿನಲ್ಲಿ ಅಶ್ವಿನಿ ಪೊನ್ನಪ್ಪ ಹಾಗೂ ಸಾತ್ವಿಕ್‌ ಸಾಯಿರಾಜ್‌, ಒಲಿಂಪಿಕ್‌ ಬೆಳ್ಳಿ ಪದಕ ವಿಜೇತ ಮಲೇಷ್ಯದ ಚಾನ್‌ ಪೆಂಗ್‌ ಹಾಗೂ ಲಿಯು ಯಿಂಗ್‌ ಜೋಡಿ ವಿರುದ್ಧ 21-18, 18-21, 21-17 ಗೇಮ್‌ಗಳಲ್ಲಿ ಗೆದ್ದು ಅಚ್ಚರಿ ಮೂಡಿಸಿದರು.