2019ನೇ ಸಾಲಿನ ಏಕದಿನ ಕ್ರಿಕೆಟ್ ವಿಶ್ವಕಪ್’ಗೆ ದಿನಗಣನೆ ಆರಂಭವಾಗಿದ್ದು, ಇಂದಿಗೆ ಸರಿಯಾಗಿ ಒಂದು ವರ್ಷಕ್ಕೆ ವಿಶ್ವಕಪ್ ಕ್ರಿಕೆಟ್’ಗೆ ಆತಿಥ್ಯ ವಹಿಸಿರುವ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುವುದರೊಂದಿಗೆ ಟೂರ್ನಿಗೆ ಚಾಲನೆ ದೊರೆಯಲಿದೆ.
ಬೆಂಗಳೂರು[ಮೇ.30]: 2019ನೇ ಸಾಲಿನ ಏಕದಿನ ಕ್ರಿಕೆಟ್ ವಿಶ್ವಕಪ್’ಗೆ ದಿನಗಣನೆ ಆರಂಭವಾಗಿದ್ದು, ಇಂದಿಗೆ ಸರಿಯಾಗಿ ಒಂದು ವರ್ಷಕ್ಕೆ ವಿಶ್ವಕಪ್ ಕ್ರಿಕೆಟ್’ಗೆ ಆತಿಥ್ಯ ವಹಿಸಿರುವ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುವುದರೊಂದಿಗೆ ಟೂರ್ನಿಗೆ ಚಾಲನೆ ದೊರೆಯಲಿದೆ.
2019ನೇ ಆವೃತ್ತಿಯ ವಿಶ್ವಕಪ್ ಟೂರ್ನಿ ರೌಂಡ್ ರಾಬಿನ್ ಮಾದರಿಯಲ್ಲಿರಲಿದ್ದು, ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ 10 ಬಲಿಷ್ಠ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.
2019ರ ವಿಶ್ವಕಪ್ ಕ್ರಿಕೆಟ್ ಸಂಪೂರ್ಣ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ :
ಒಟ್ಟು ಎಡ್ಜ್ ಬಾಸ್ಟನ್, ದ ಓವಲ್, ಟ್ರೆಂಟ್ ಬ್ರಿಡ್ಜ್ ಸೇರಿದಂತೆ ಒಟ್ಟು 11 ಸ್ಥಳಗಳಲ್ಲಿ 48 ಪಂದ್ಯಗಳ ಜರುಗಲಿದ್ದು, ಭಾರತ ತಂಡವು ಜೂನ್ 05 ರಂದು ತನ್ನ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.
