ಮುಂದಿನ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ದಕ್ಷಿಣ ಆಫ್ರಿಕಾ ಅಥವಾ ಆಸ್ಟ್ರೇಲಿಯಾದಲ್ಲಿ ನಡೆಯುವ ಸಾಧ್ಯತೆಗಳಿವೆ.

ಲಂಡನ್(ಜೂ.18): ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ಐಸಿಸಿಯ ಅಗ್ರ ಸದಸ್ಯ ರಾಷ್ಟ್ರಗಳು 2018ರಲ್ಲಿ ದ್ವಿಪಕ್ಷೀಯ ಸರಣಿಗಳನ್ನು ಆಡುವುದರಲ್ಲಿ ನಿರತವಾಗುವ ಕಾರಣ ಐಸಿಸಿ ಈ ತೀರ್ಮಾನಕ್ಕೆ ಬಂದಿದ್ದು, ಪಂದ್ಯಾವಳಿಯನ್ನು 2020ಕ್ಕೆ ಮುಂದೂಡಿದೆ. ಆದರೆ, ಯಾವ ದೇಶದಲ್ಲಿ ಪಂದ್ಯಾವಳಿ ನಡೆಯಲಿದೆ ಎಂಬುದು ಇನ್ನು ನಿರ್ಧಾರಗೊಂಡಿಲ್ಲ ಎಂದು ಐಸಿಸಿಯ ಉನ್ನತ ಮೂಲಗಳು ತಿಳಿಸಿವೆ.

ಮುಂದಿನ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ದಕ್ಷಿಣ ಆಫ್ರಿಕಾ ಅಥವಾ ಆಸ್ಟ್ರೇಲಿಯಾದಲ್ಲಿ ನಡೆಯುವ ಸಾಧ್ಯತೆಗಳಿವೆ.

ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು 2007ರಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿತ್ತು. ದಕ್ಷಿಣ ಆಫ್ರಿಕಾ ಇದರ ಆತಿಥ್ಯ ವಹಿಸಿತ್ತು. ಇದಾದ ಬಳಿಕ ಇಂಗ್ಲೆಂಡ್, ವೆಸ್ಟ್‌ಇಂಡೀಸ್, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಕಳೆದ ವರ್ಷ (2016) ಭಾರತದಲ್ಲಿ ಪಂದ್ಯಾವಳಿಯನ್ನು ನಡೆಸಲಾಗಿತ್ತು.