ಟಿಕೆಟ್ ದರದ ಮೇಲೆ ಶೇಕಡ 28ರಷ್ಟು ಜಿಎಸ್‌ಟಿ ವಿಧಿಸಬೇಕಾಗಿರುವ ಹಿನ್ನೆಲೆಯಲ್ಲಿ 500 ಇದ್ದಂತಹ ಟಿಕೆಟ್ ದರ 650ಕ್ಕೇರಿದೆ.

ಕೋಲ್ಕತಾ(ಆ.21): ಕೇಂದ್ರ ನೂತನವಾಗಿ ಜಾರಿಗೆ ತಂದಿರುವ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ), ಕ್ರಿಕೆಟ್ ಪಂದ್ಯಗಳ ಮೇಲೂ ಪರಿಣಾಮ ಬೀರಿದ್ದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಏಕದಿನ ಸರಣಿಯ ಟಿಕೆಟ್ ದರ ಕೂಡ ಹೆಚ್ಚಾಗಿದೆ. ಟಿಕೆಟ್ ದರದ ಮೇಲೆ ಶೇಕಡ 28ರಷ್ಟು ಜಿಎಸ್‌ಟಿ ವಿಧಿಸಬೇಕಾಗಿರುವ ಹಿನ್ನೆಲೆಯಲ್ಲಿ 500 ಇದ್ದಂತಹ ಟಿಕೆಟ್ ದರ 650ಕ್ಕೇರಿದೆ. 1000 ಹಾಗೂ 1500 ಇದ್ದಂತಹ ಟಿಕೆಟ್ ದರ ಕ್ರಮವಾಗಿ 1300, 1900ಕ್ಕೆ ಏರಿಕೆ ಆಗಿದೆ. ಇನ್ನು ಟೆಸ್ಟ್ ಪಂದ್ಯಗಳ ಟಿಕೆಟ್‌ಗಳಿಗೆ ಜಿಎಸ್‌ಟಿ ಅನ್ವಯವಾಗುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.