ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಪೃಥ್ವಿ ಇನ್ನಿಂಗ್ಸ್, ಸೆಹ್ವಾಗ್ ಬ್ಯಾಟಿಂಗ್ ನೆನಪಿಸುವಂತಿತ್ತು ಎಂದು ಟ್ವಿಟರಿಗರು ಪ್ರತಿಕ್ರಿಯಿಸಿದ್ದಾರೆ.
ಹೈದರಾಬಾದ್(ಅ.13): ವೆಸ್ಟ್ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಕೇವಲ 39 ಎಸೆತದಲ್ಲಿ ಅರ್ಧಶತಕ ಪೂರೈಸಿದ ಪೃಥ್ವಿ ಬ್ಯಾಟಿಂಗ್ ಶೈಲಿಯನ್ನ ಸೆಹ್ವಾಗ್‌ಗೆ ಹೋಲಿಸಲಾಗ್ತಿದೆ.
ವಿಂಡೀಸ್ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಪೃಥ್ವಿ ಶಾ 53 ಎಸೆತದಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 70 ರನ್ ಸಿಡಿಸಿದರು. ಪೃಥ್ವಿ ಶಾ ಬ್ಯಾಟಿಂಗ್‌ನ್ನ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್‌ಗೆ ಹೋಲಿಸಿದ್ದಾರೆ.
ಪೃಥ್ವಿ ಶಾ ಬ್ಯಾಟಿಂಗ್ ಕುರಿತು ಟ್ವಿಟರಿಗರ ಅಭಿಪ್ರಾಯ ಇಲ್ಲಿದೆ.
