ಟೀಂ ಇಂಡಿಯಾ ಆಯ್ಕೆ ಸಮಿತಿ ಏಕದಿನ ಹಾಗೂ ಟಿ20 ತಂಡ ಪ್ರಕಟಿಸುತ್ತಿದ್ದಂತೆ. ಎಂ.ಎಸ್.ಧೋನಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ತಂಡಕ್ಕೆ ವಾಪಾಸ್ಸಾಗಿರುವ ಧೋನಿ ಕುರಿತು ಟ್ವಿಟರಿಗರು ಹೇಳಿದ್ದೇನು? ಇಲ್ಲಿದೆ ಪ್ರತಿಕ್ರಿಯೆ.
ಮುಂಬೈ(ಡಿ.24): ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಹಾಗೂ ನ್ಯೂಜಿಲೆಂಡ್ ವಿರುದ್ದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆಯಾಗಿದೆ. ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಿಂದ ಹೊರಗುಳಿದಿದ್ದ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಇದು ಟ್ವಿಟರಿಗರ ಸಂತಸವನ್ನ ಇಮ್ಮಡಿಗೊಳಿಸಿದೆ.
ಇದನ್ನೂ ಓದಿ: ಟಿ20 ಸರಣಿಯಿಂದ ಮನೀಶ್ ಪಾಂಡೆಗೆ ಕೊಕ್-ಟ್ವಿಟರಿಗರ ಆಕ್ರೋಶ!
ಭಾರತ ಟಿ20 ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂ.ಎಸ್.ಧೋನಿ, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್
ಇದನ್ನೂ ಓದಿ: ಟಿ20 ಸರಣಿಗೆ ಸುರೈಶ್ ರೈನಾಗಿಲ್ಲ ಸ್ಥಾನ-ಟ್ವಿಟರಿಗರಿಂದ ಕ್ಲಾಸ್!
ಭಾರತ ಏಕದಿನ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ಅಂಬಾಟಿ ರಾಯುಡು, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂ.ಎಸ್.ಧೋನಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಮೊಹಮ್ಮದ್ ಶಮಿ
