ವಿಶಾಖಪಟ್ಟಣಂ(ಅ.02): ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಭರ್ಜರಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ. ಸಚಿನ್ ತೆಂಡುಲ್ಕರ್ ವಿದಾಯದ ಸರಣಿಯಲ್ಲಿ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ ಮೊದಲ ಪಂದದ್ಯದಲ್ಲೇ ಶತಕ ಸಿಡಿಸಿದ್ದರು. ಇದೀಗ ಆರಂಭಿಕನಾಗಿ ಮೊದಲ ಪಂದ್ಯ ಆಡಿದ್ದ ರೋಹಿತ್ ಸೆಂಚುರಿ ಮೂಲಕ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ವೈಜಾಗ್ ಟೆಸ್ಟ್: ಆರಂಭಿಕನಾಗಿ ರೋಹಿತ್ ಶರ್ಮಾ ದಾಖಲೆಯ ಶತಕ

ಟೆಸ್ಟ್ ಮಾದರಿಯಲ್ಲಿ 4ನೇ ಸೆಂಚುರಿ ಪೂರೈಸಿರುವ ರೋಹಿತ್ ಶರ್ಮಾ, ಭಾರತದ ಆರಂಭಿಕರ ಸಮಸ್ಯೆಗೆ ಪರಿಹಾರ ನೀಡಿದ್ದಾರೆ. ಇದೀಗ ರೋಹಿತ್ ಸೆಂಚುರಿ ಸಾಧನೆಗೆ ಕ್ರಿಕೆಟ್ ದಿಗ್ಗಜರು ಸೇರದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.