ವೆಡ್ಡಿಂಗ್ ಆ್ಯನಿವರ್ಸರಿ ದಿನವೇ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಜೋಡಿಯ ತ್ಯಾಗ ವಿಶ್ವದೆಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಕೊಹ್ಲಿ ತ್ಯಾಗಕ್ಕೆ ಟ್ವಿಟರಿಗರ ಪ್ರತಿಕ್ರಿಯೆ ಹೇಗಿದೆ? ಇಲ್ಲಿದೆ ವಿವರ.
ಪರ್ತ್(ಡಿ.11): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಮೊದಲ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಂಡಿದ್ದಾರೆ. ಇದೇ ವೇಳೆ ಟೀಂ ಇಂಡಿಯಾ ವೇಗಿಗಳಿಗೆ ತಮ್ಮ ಬ್ಯುಸಿನೆಸ್ ಕ್ಲಾಸ್ ಸೀಟ್ ಬಿಟ್ಟುಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಆಡಿಲೇಡ್‌ನಿಂದ ಪರ್ತ್‌ಗೆ ತೆರಳುವ ವೇಳೆ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಬ್ಯುಸಿನೆಸ್ ಕ್ಲಾಸ್ ಸೀಟನ್ನ ಟೀಂ ಇಂಡಿಯಾ ವೇಗಿಗಳಿಗೆ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ವೇಗಿಗಳು ಸುಖಕರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕೊಹ್ಲಿ ತ್ಯಾಗಕ್ಕೆ ಇದೀಗ ಎಲ್ಲೆಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕ್ರಿಕೆಟಿಗರು ಸೇರಿದಂತೆ ಅಭಿಮಾನಿಗಳು ವಿರುಷ್ಕಾ ಜೋಡಿಯ ತ್ಯಾಗವನ್ನ ಕೊಂಡಾಡಿದ್ದಾರೆ.
