ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಎಂ.ಎಸ್ ಧೋನಿ ಮತ್ತೆ ನಾಯಕನಾಗಿ ಕಣಕ್ಕಿಳಿದಿದ್ದಾರೆ. ರೋಹಿತ್ ಶರ್ಮಾ ಬದಲು ಧೋನಿ ಟೀಂ ಇಂಡಿಯಾ ನಾಯಕ ಜವಾಬ್ದಾರಿ ವಹಿಸಿದ್ದಾರೆ. ಧೋನಿ ನಾಯಕತ್ವಕ್ಕೆ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು? ಇಲ್ಲಿದೆ.
ದುಬೈ(ಸೆ.25): ಏಷ್ಯಾಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಐತಿಹಾಸಿಕ ಪಂದ್ಯವಾಗಿ ಮಾರ್ಪಟ್ಟಿದೆ. ಕಾರಣ ಟಾಸ್ ವೇಳೆ ನಾಯಕ ರೋಹಿತ್ ಶರ್ಮಾ ಬದಲು ಎಂ.ಎಸ್ ಧೋನಿ ಕಣಕ್ಕಿಳಿದಿದ್ದರು. ಈ ಮೂಲಕ ಧೋನಿ ಮತ್ತೆ ಟೀಂ ಇಂಡಿಯಾ ನಾಯಕನ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಅಫ್ಘಾನಿಸ್ತಾನ ವಿರುದ್ದ ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಧೋನಿ ಮತ್ತೆ ಟೀಂ ಇಂಡಿಯಾ ನಾಯಕನಾಗಿ 200ನೇ ಏಕದಿನ ಪಂದ್ಯ ಆಡುತ್ತಿದ್ದಾರೆ. ಧೋನಿ ನಾಯಕನಾಗಿ ಕಮ್‌ಬ್ಯಾಕ್ ಮಾಡುತ್ತಿದ್ದಂತೆ ಅಭಿಮಾನಿಗಳು ಉತ್ಸಾಹ ಇಮ್ಮಡಿಗೊಂಡಿದೆ.
ಧೋನಿ ನಾಯಕತ್ವ ವಹಿಸಿಕೊಂಡಿರುವುದು ಅಭಿಮಾನಿಗಳು ಟ್ವಿಟರ್‌ನಲ್ಲಿ ಪ್ರತಿಕ್ರಿಸಿದ್ದಾರೆ. ಇಲ್ಲಿದೆ ಟ್ವಿಟರ್ ಪ್ರತಿಕ್ರಿಯೆ.
;
