ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ 81 ರನ್ ಸಿಡಿಸುತ್ತಿದ್ದಂತೆ 10 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು. ಈ ಮೂಲಕ 10 ಸಾವಿರ ರನ್ ಪೂರೈಸಿದ ವಿಶ್ವದ 13ನೇ ಹಾಗೂ ಭಾರತದ 5ನೇ ಬ್ಯಾಟ್ಸ್’ಮನ್ ಎನ್ನುವ ಕೀರ್ತಿಗೆ ಪಾತ್ರರಾದರು.
ವಿಶಾಖಪಟ್ಟಣಂ[ಅ.24]: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್’ನಲ್ಲಿ ಅತಿ ವೇಗವಾಗಿ 10 ಸಾವಿರ ರನ್ ಪೂರೈಸಿದ ಸಾಧನೆ ಮಾಡುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ 81 ರನ್ ಸಿಡಿಸುತ್ತಿದ್ದಂತೆ 10 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು. ಈ ಮೂಲಕ 10 ಸಾವಿರ ರನ್ ಪೂರೈಸಿದ ವಿಶ್ವದ 13ನೇ ಹಾಗೂ ಭಾರತದ 5ನೇ ಬ್ಯಾಟ್ಸ್’ಮನ್ ಎನ್ನುವ ಕೀರ್ತಿಗೆ ಪಾತ್ರರಾದರು. ವಿರಾಟ್ ಕೇವಲ 205 ಇನ್ನಿಂಗ್ಸ್’ಗಳಲ್ಲಿ 10 ಸಾವಿರ ರನ್ ಪೂರೈಸುವ ಮೂಲಕ ಅತಿವೇಗವಾಗಿ 10 ಸಹಸ್ರ ರನ್ ಪೂರೈಸಿದ ಆಟಗಾರ ಎನ್ನುವ ಕೀರ್ತಿಗೆ ಭಾಜನರಾದರು.
ಇದೇ ಪಂದ್ಯದಲ್ಲಿ ಕೊಹ್ಲಿ 37ನೇ ಶತಕವನ್ನು ಪೂರೈಸಿದರು. ಕಿಂಗ್ ಕೊಹ್ಲಿ ಬ್ಯಾಟಿಂಗ್ ಪ್ರದರ್ಶನವನ್ನು ಕ್ರಿಕೆಟ್ ದಿಗ್ಗಜರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕೊಹ್ಲಿ ಆಟ ಕಂಡ ಟ್ವಿಟರಿಗರು ಏನಂದ್ರು ಅಂತ ನೀವೇ ನೋಡಿ..
