ಕೊಹ್ಲಿ-ಧೋನಿ ಬ್ಯಾಟಿಂಗ್ ಕಂಡು ಫಿದಾ ಆದ ಕ್ರಿಕೆಟಿಗರು..!

ಅಡಿಲೇಡ್’ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 299 ರನ್’ಗಳ ಸವಾಲಿನ ಗುರಿ ಬೆನ್ನತ್ತಿದ ಭಾರತ ದಾಖಲೆಯ ಗೆಲುವು ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು 1-1 ರ ಸಮಬಲ ಸಾಧಿಸಿವೆ.

Twitter Reactions Virat Kohli majestic ton

ಬೆಂಗಳೂರು[ಜ.15]: ನಾಯಕ ವಿರಾಟ್ ಕೊಹ್ಲಿಯ ದಾಖಲೆಯ ಶತಕ, ಮಹೇಂದ್ರ ಸಿಂಗ್ ಧೋನಿ ಸಮಯೋಚಿಯ ಅಜೇಯ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯವನ್ನು ಗೆದ್ದುಕೊಂಡಿದೆ. 

ಅಡಿಲೇಡ್’ನಲ್ಲಿ ಆಸ್ಟ್ರೇಲಿಯಾ ನೀಡಿದ್ದ 299 ರನ್’ಗಳ ಸವಾಲಿನ ಗುರಿ ಬೆನ್ನತ್ತಿದ ಭಾರತ ದಾಖಲೆಯ ಗೆಲುವು ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು 1-1 ರ ಸಮಬಲ ಸಾಧಿಸಿವೆ. ನಾಯಕ ವಿರಾಟ್ ಕೊಹ್ಲಿ ದಾಖಲೆಯ 39ನೇ ಏಕದಿನ ಶತಕ ಸಿಡಿಸಿದರೆ, ಧೋನಿ ಸತತ ಎರಡನೇ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಕೊನೆಯಲ್ಲಿ ದಿನೇಶ್ ಕಾರ್ತಿಕ್ ಕೇವಲ 14 ಎಸೆತಗಳಲ್ಲಿ 25 ರನ್ ಸಿಡಿಸಿ ಭಾರತದ ಗೆಲುವನ್ನು ಸುಲಭವಾಗಿಸಿಕೊಟ್ಟರು.

ಟೀಂ ಇಂಡಿಯಾದ ಈ ಅದ್ಭುತ ಪ್ರದರ್ಶನಕ್ಕೆ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೊಹ್ಲಿ ಪಡೆಗೆ ಫುಲ್ ಮಾರ್ಕ್ಸ್ ನೀಡಿದ್ದಾರೆ. 

Latest Videos
Follow Us:
Download App:
  • android
  • ios