ರೋಹಿತ್ ಕ್ಲಿಕ್; ಪಾಂಡ್ಯ ಪ್ಲಾಫ್..! ಟ್ಟಿಟರಿಗರೂ ಏನಂದ್ರು ನೀವೆ ನೋಡಿ...

First Published 13, Feb 2018, 10:09 PM IST
Twitter Reacts As Another Middle Order Collapse Restricts India To Below Par Total
Highlights

ಹಾರ್ದಿಕ್ ಪಾಂಡ್ಯ ಶೂನ್ಯ ಸುತ್ತಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಧೋನಿಯಿಂದ ಕೂಡಾ ಸ್ಫೋಟಕ ಬ್ಯಾಟಿಂಗ್ ಮೂಡಿ ಬರಲಿಲ್ಲ. ಟೀಂ ಇಂಡಿಯಾ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹೀಗೆ...

ಸತತ ವೈಫಲ್ಯಗಳಿಂದ ರೋಹಿತ್ ಶರ್ಮಾ ಹೊರಬಂದಿದ್ದಾರೆ. ರೋಹಿತ್ ಶರ್ಮಾ ಬಾರಿಸಿದ ಆಕರ್ಷಕ (115 ರನ್'ಗಳ) ಶತಕದ ನೆರವಿನಿಂದ ಟೀಂ ಇಂಡಿಯಾ 274 ರನ್ ಕಲೆಹಾಕಿದೆ.

ಒಂದು ಹಂತದಲ್ಲಿ ಟೀಂ ಇಂಡಿಯಾ 300ಕ್ಕೂ ಹೆಚ್ಚು ರನ್ ಕಲೆಹಾಕಬಹುದು ಎಂದು ಕ್ರಿಕೆಟ್ ಅಭಿಮಾನಿಗಳು ಭಾವಿಸಿದ್ದರು. ಆದರೆ ಮಧ್ಯಮ ಕ್ರಮಾಂಕ ದಿಢೀರ್ ಕುಸಿತ ಕಂಡಿದ್ದರಿಂದ ಅಭಿಮಾನಿಗಳ ನಿರೀಕ್ಷೆ ತಲೆಕೆಳಗಾಯಿತು. 236 ರನ್'ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಭಾರತ ಆಬಳಿಕ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಕಳೆದುಕೊಂಡಿತು. ಹಾರ್ದಿಕ್ ಪಾಂಡ್ಯ ಶೂನ್ಯ ಸುತ್ತಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಧೋನಿಯಿಂದ ಕೂಡಾ ಸ್ಫೋಟಕ ಬ್ಯಾಟಿಂಗ್ ಮೂಡಿ ಬರಲಿಲ್ಲ. ಟೀಂ ಇಂಡಿಯಾ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹೀಗೆ...

loader