ಮಿಥಾಲಿ ರಾಜ್ ಸಾಧನೆಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ ಪರಿಯಿದು...
ಮಹಿಳಾ ಏಕದಿನ ಕ್ರಿಕೆಟ್'ನಲ್ಲಿ ಗರಿಷ್ಟ ರನ್ ಬಾರಿಸಿ ವಿಶ್ವದಾಖಲೆ ನಿರ್ಮಿಸಿದ ಭಾರತ ತಂಡದ ನಾಯಕಿ ಮಿಥಾಲಿ ರಾಜ್'ಗೆ ಅಭಿನಂದನೆಯ ಮಹಾಪೂರವೇ ಹರಿಸು ಬರುತ್ತಿದೆ.
ಇಂದು ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ವಿಶ್ವಕಪ್ ಲೀಗ್'ನಲ್ಲಿ ಇಂಗ್ಲೆಂಡ್ ಆಟಗಾರ್ತಿ ಶಾರ್ಲೆಟ್ ಎಡ್ವರ್ಡ್(5992 ರನ್) ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಹೊಸ ಇತಿಹಾಸ ಬರೆದರು. ಇದರ ಜೊತೆಗೆ 6 ಸಾವಿರ ರನ್ ಬಾರಿಸಿದ ವಿಶ್ವದ ಮೊದಲ ಮಹಿಳಾ ಕ್ರಿಕೆಟ್ ಆಟಗಾರ್ತಿ ಎನ್ನುವ ಶ್ರೇಯವೂ ಮಿಥಾಲಿ ಪಾಲಾಯಿತು.
ಮಿಥಾಲಿ ರಾಜ್ ಸಾಧನೆಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ ಪರಿಯಿದು...
