ಟೀಂ ಇಂಡಿಯಾದ ಭರ್ಜರಿ ಪ್ರದರ್ಶನದ ಬಗ್ಗೆ ಸಾಮಾಜಿಕ ಜಾಲತಾಣವಾದ ಟ್ವಿಟರ್'ನಲ್ಲಿ ಕ್ರಿಕೆಟ್ ಅಭಿಮಾನಿಗಳು ಕೊಹ್ಲಿ ಪಡೆಯನ್ನು ಕೊಂಡಾಡಿದ್ದು ಹೀಗೆ...
ಬೆಂಗಳೂರು(ಆ.04): ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲೂ ಶ್ರೀಲಂಕಾ ಎದುರು ತನ್ನ ಭರ್ಜರಿ ಪ್ರದರ್ಶನವನ್ನು ಮುಂದುವರೆಸಿದೆ.
ಮೊದಲ ದಿನವೇ ಚೇತೇಶ್ವರ ಪೂಜಾರ ಹಾಗೂ ಅಜಿಂಕ್ಯ ರಹಾನೆ ಆಕರ್ಷಕ ಶತಕ ಸಿಡಿಸಿ ತಂಡಕ್ಕೆ ನೆರವಾಗಿದ್ದರು. ಎರಡನೇ ದಿನ ಕೆಳಕ್ರಮಾಂಕದಲ್ಲಿ ವೃದ್ದಿಮಾನ್ ಸಾಹ, ಆರ್. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಬಾರಿಸಿದ ಅರ್ಧಶತಕಗಳ ನೆರವಿನಿಂದ ಭಾರತ 622 ರನ್'ಗಳ ಬೃಹತ್ ಮೊತ್ತ ಕಲೆಹಾಕಿ ಡಿಕ್ಲೇರ್ ಮಾಡಿಕೊಂಡಿತು. ಆ ನಂತರ ಬ್ಯಾಟಿಂಗ್ ಇಳಿದ ಶ್ರೀಲಂಕಾಕ್ಕೆ ಆರ್. ಅಶ್ವಿನ್ ಶಾಕ್ ನೀಡುವಲ್ಲಿ ಯಶಸ್ವಿಯಾದರು.
ಟೀಂ ಇಂಡಿಯಾದ ಭರ್ಜರಿ ಪ್ರದರ್ಶನದ ಬಗ್ಗೆ ಸಾಮಾಜಿಕ ಜಾಲತಾಣವಾದ ಟ್ವಿಟರ್'ನಲ್ಲಿ ಕ್ರಿಕೆಟ್ ಅಭಿಮಾನಿಗಳು ಕೊಹ್ಲಿ ಪಡೆಯನ್ನು ಕೊಂಡಾಡಿದ್ದು ಹೀಗೆ...