ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಇದೀಗ ಪರ್ತ್ ಟೆಸ್ಟ್ ಪಂದ್ಯದ 2 ಇನ್ನಿಂಗ್ಸ್‌ಗಳಲ್ಲಿ ವೈಫಲ್ಯ ಅನುಭವಿಸಿರುವ ರಾಹುಲ್ ವಿರುದ್ದ ಟ್ವಿಟರಿಗರು ಗರಂ ಆಗಿದ್ದಾರೆ.
ಪರ್ತ್(ಡಿ.17) ಆಸ್ಟ್ರೇಲಿಯಾ ವಿರುದ್ಧದ ಪರ್ತ್ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಕೆಎಲ್ ರಾಹುಲ್ ಕಳಪೆ ಪ್ರದರ್ಶನ ನೀಡಿದ್ದಾರೆ. ಶೂನ್ಯ ಸುತ್ತಿದ ರಾಹುಲ್ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾಗಿದ್ದಾರೆ. ರಾಹುಲ್ ಕಳಪೆ ಪ್ರದರ್ಶನ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ:#INDvAUS ಕೊನೆಯ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ!
ರಾಹುಲ್ ಶೂನ್ಯಕ್ಕೆ ಔಟಾಗುತ್ತಿದ್ದಂತೆ, ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್‌ಗೆ ವಿಶ್ರಾಂತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಹುಲ್ ಬದಲು ಮತ್ತೊರ್ವ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಸ್ಥಾನ ನೀಡಲು ಮನವಿ ಮಾಡಿದ್ದಾರೆ.
