ಟ್ರಿನಿಡಾಡ್(ಆ.12): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ 18 ರನ್ ಸಿಡಿಸಿ ಔಟಾದರು.  ಈ ಮೂಲಕ ಅತ್ಯುತ್ತಮ ಅವಕಾಶವನ್ನು ಕೈಚೆಲ್ಲಿದರು. ಟೀಂ ಇಂಡಿಯಾದಲ್ಲಿ ಸತತ ಅವಕಾಶ ಪಡೆಯುತ್ತಿರುವ ಪಂತ್, ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಟೀಂ ಮ್ಯಾನೇಜ್ಮೆಂಟ್ ಕೂಡ ಪಂತ್‌ ಬೆಂಬಲಕ್ಕೆ ನಿಂತಿರುವುದು ಇದೀಗ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ. ಟ್ವಿಟರ್ ಮೂಲಕ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.