ವೆಸ್ಟ್ಇಂಡೀಸ್ ವಿರುದ್ಧದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟರಿಗರ ಆಕ್ರೋಶದ ವಿವರ ಇಲ್ಲಿದೆ.
ಹೈದರಾಬಾದ್(ಅ.11): ಭಾರತ ಹಾಗೂ ವೆಸ್ಟ್ಇಂಡೀಸ್ ವಿರುದ್ಧದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭಗೊಳ್ಳಲಿದೆ. ಈಗಾಗಲೇ ಭಾರತ 1-0 ಅಂತರ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ನಾಳಿನ ಪಂದ್ಯಕ್ಕೆ 12 ಸದಸ್ಯರ ತಂಡವನ್ನ ಟೀಂ ಇಂಡಿಯಾ ಪ್ರಕಟಿಸಿದೆ.
ಇದನ್ನೂ ಓದಿ: ಕನ್ನಡಿಗ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರ ಆಕ್ರೋಶ!
ಈಗಾಗಲೇ ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ 2ನೇ ಪಂದ್ಯದಲ್ಲೂ ಯುವ ಆಟಗಾರರಿಗೆ ಅವಕಾಶ ನೀಡಿಲ್ಲ. ಅದರಲ್ಲೂ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಸ್ಥಾನ ನೀಡಿಲ್ಲ. ಇದು ಮತ್ತೆ ಟ್ವಿಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.
