ಇತ್ತೀಚೆಗೆ ಚೀನಾ ಪ್ರವಾಸ ಕೈಗೊಂಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧಿಕಾರಿಗಳು, ಚೀನಾ ಆಟಗಾರರಿಗೆ ಪಿಎಸ್‌ಎಲ್‌ನಲ್ಲಿ ಆಡಲು ಅವಕಾಶ ನೀಡುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಬೀಜಿಂಗ್(ಆ.20): ಚೀನಾದಲ್ಲೂ ಕ್ರಿಕೆಟ್ ಜನಪ್ರಿಯತೆ ಹೆಚ್ಚುತ್ತಿದ್ದು, ಮುಂದಿನ ವರ್ಷ ಪಾಕಿಸ್ತಾನ ಸೂಪರ್ ಲೀಗ್ ಟಿ20 ಪಂದ್ಯಾವಳಿಗೆ ಚೀನಾದ ಇಬ್ಬರು ಆಟಗಾರರನ್ನು ಸೇರಿಸಿಕೊಳ್ಳಲಾಗುತ್ತಿದೆ. ಚೀನಾ ರಾಷ್ಟ್ರೀಯ ತಂಡದ ಇಬ್ಬರು ಆಟಗಾರರು ಮುಂದಿನ ಆವೃತ್ತಿಯಲ್ಲಿ ಪೇಶಾವರ್ ಝಲ್ಮಿ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಚೀನಾ ಪ್ರವಾಸ ಕೈಗೊಂಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧಿಕಾರಿಗಳು, ಚೀನಾ ಆಟಗಾರರಿಗೆ ಪಿಎಸ್ಎಲ್ನಲ್ಲಿ ಆಡಲು ಅವಕಾಶ ನೀಡುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಪಾಕಿಸ್ತಾನ ತಂಡದ ತವರಿನ ಪಂದ್ಯಗಳನ್ನು ಯುಎಇ ಬದಲಿಗೆ ಚೀನಾದಲ್ಲಿ ನಡೆಸುವ ಪ್ರಸ್ತಾಪವನ್ನು ಇಡಲಾಗಿದೆ ಎಂದು ಮೂಲಗಳು ತಿಳಿಸಿವೆ.
