ಸ್ಫೋಟಕ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾಗೆ ತಲೆನೋವಾದ ಇಂಗ್ಲೆಂಡ್ ಆರಂಭಿಕ ಜೇಸನ್ ರಾಯ್ ವಿಕೆಟ್ ಪತನಗೊಂಡಿದೆ. ಭಾರತ-ಇಂಗ್ಲೆಂಡ್ ಮೊದಲ ಟಿ20 ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ.

ಒಲ್ಡ್ ಟ್ರಾಫೋರ್ಡ್(ಜು.03): ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ಆತಿಥೇಯರನ್ನ ಬ್ಯಾಟಿಂಗ್ ಆಹ್ವಾನಿಸಿತು. ಆದರೆ ಕ್ರೀಸಿಗಿಳಿದ ಆರಂಭಿಕರಾದ ಜೋಸ್ ಬಟ್ಲರ್ ಹಾಗೂ ಜೇಸನ್ ರಾಯ್ ಅಬ್ಬರಕ್ಕೆ ಭಾರತೀಯ ಬೌಲರ್‌ಗಳು ಸುಸ್ತಾದರು. ತಾಳ್ಮೆಯ ಆಟವಾಡಿದ ಭಾರತ ಕೊನೆಗೂ ಆರಂಭಿಕರನ್ನ ಬೇರ್ಪಡಿಸುವಲ್ಲಿ ಯಶಸ್ವಿಯಾಗಿದೆ.

20 ಎಸೆತದಲ್ಲಿ 5 ಬೌಂಡರಿ ಮೂಲಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಜೇಸನ್ ರಾಯ್ ವಿಕೆಟ್ ಪತನಗೊಂಡಿದೆ. ಉಮೇಶ್ ಯಾದವ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದ ರಾಯ್ ಪೆವಿಲಿಯನ್ ಸೇರಿದರು. ಇಂಗ್ಲೆಂಡ್ 50 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿದೆ.

Scroll to load tweet…