2003ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಭಾರತ ಸೋಲು ಅನುಭವಿಸಿದ್ದರೆ, 2016ರಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 1 ರನ್‌'ಗಳ ರೋಚಕ ಗೆಲುವು ಸಾಧಿಸಿತ್ತು.
ಬೆಂಗಳೂರು(ಮಾ.23): ಭಾರತ ಕ್ರಿಕೆಟ್ ಇತಿಹಾಸದಲ್ಲಿ ಎರಡು ಪ್ರಮುಖ ಪಂದ್ಯಗಳಿಗೆ ಮಾರ್ಚ್ 23 ಸಾಕ್ಷಿಯಾಗಿತ್ತು.
2003ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಭಾರತ ಸೋಲು ಅನುಭವಿಸಿದ್ದರೆ, 2016ರಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 1 ರನ್'ಗಳ ರೋಚಕ ಗೆಲುವು ಸಾಧಿಸಿತ್ತು.
2003ರಲ್ಲಿ ಜೋಹಾನ್ಸ್ಬರ್ಗ್ನಲ್ಲಿ ನಡೆದಿದ್ದ ವಿಶ್ವಕಪ್ ಕ್ರಿಕೆಟ್ ಫೈನಲ್'ನಲ್ಲಿ ಸೌರವ್ ಗಂಗೂಲಿ ನೇತೃತ್ವದ ಭಾರತ ತಂಡ, ಆಸ್ಟ್ರೇಲಿಯಾ ವಿರುದ್ಧ 125ರನ್'ಗಳ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿತ್ತು.
ಇನ್ನು ಕಳೆದ ವರ್ಷ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಬಾಂಗ್ಲಾದೇಶ ವಿರುದ್ಧದ ಟಿ20 ಪಂದ್ಯದಲ್ಲಿ ನಾಯಕ ಧೋನಿ ಮಾಡಿದ ರೋಚಕ ರನೌಟ್'ನಿಂದಾಗಿ 1ರನ್ಗಳ ಗೆಲುವು ಪಡೆದಿತ್ತು.
ಹೀಗಿತ್ತು ಆ ರೋಚಕ ಕ್ಷಣ...

